ಪಬ್ಲಿಕ್ ಅಲರ್ಟ್
ಮೈಸೂರು: ಮೈಸೂರು, ಮಂಡ್ಯ, ಚಾಮರಾಜನಗರ, ಮಡಿಕೇರಿ, ಹಾಸನ, ರಾಮನಗರ, ಚಿಕ್ಕಮಗಳೂರು ಭಾಗದ ಕುರುಬ ಸಮುದಾಯದ ಸಭೆಯನ್ನು ಮೈಸೂರಿನಲ್ಲಿ ನಡೆಸಲಾಯಿತು.
ಸಿದ್ಧಾರ್ಥನಗರದ ಕನಕಭವನದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಶಿವಾನಂದಪುರಿ ಸ್ವಾಮೀಜಿ ಮಾತನಾಡಿ, ಸಮುದಾಯವನ್ನು ಎಸ್ಟಿಗೆ ಸೇರಿಸುತ್ತಿರುವುದನ್ನು ಸಮುದಾಯ ಸ್ವಾಗತಿಸುತ್ತದೆ. ಜತೆಗೆ ಸೆ.22ರಿಂದ ನಡೆಯುವ ಸಾಮಾಜಿಕ ಸಮೀಕ್ಷೆಯಲ್ಲಿ ಎಲ್ಲರೂ ಕುರುಬ ಎಂದೇ ನಮೂದಿಸಬೇಕು. ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಸಿಗಬೇಕೆಂಬ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯ ಜಾತಿ ಸಮೀಕ್ಷೆಗೆ ಮುಂದಾಗಿದ್ದು ಅದನ್ನು ಎಲ್ಲರೂ ಸ್ವಾಗತಿಸಬೇಕೆಂದು ಹೇಳಿದರು.
ಕರ್ನಾಟಕ ರಾಜ್ಯ ಕುರುಬರ ಸಂಘದ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ ಮಾತನಾಡಿ, ಎಂಟು ಜಿಲ್ಲೆಗಳ ಕುರುಬ ಸಮುದಾಯದ ನಾಯಕರು, ಮುಖಂಡರು ಸಭೆ ನಡೆಸಿದ್ದೇವೆ. ಬೀದರ್, ಗುಲ್ಬರ್ಗ ಯಾದವಗಿರಿ ಜಿಲ್ಲೆಯಲ್ಲಿ ಈಗಾಗಲೇ ಕಾಡು ಕುರುಬ, ಜೇನು ಕುರುಬ ಸಮುದಾಯ ಎಸ್ಟಿಯಲ್ಲಿದ್ದಾರೆ. ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಸಂಬಂಧ ಈಗಾಗಲೇ ಕುಲಶಾಸ್ತ್ರ ಅಧ್ಯಯನ ಆಗಿ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಬೊಮ್ಮಾಯಿ ಸರ್ಕಾರವೇ ಕೇಂದ್ರಕ್ಕೆ ಕಳುಹಿಸಿದ್ದರು. ಅದು ವಾಪಾಸ್ ಬಂದಿದ್ದು, ಅದನ್ನು ಮತ್ತೆ ಕಳುಹಿಸಲಾಗಿದೆ ಎಂದರು.
ನಮ್ಮಲ್ಲಿ ಯಾವುದೇ ಸಮುದಾಯವನ್ನು ಎತ್ತಿಕಟ್ಟುವ ಕೆಲಸ ಆಗುತ್ತಿಲ್ಲ. ಅದನ್ನು ಶಾಸಕ ಶ್ರೀವತ್ಸ, ಮಾಜಿ ಸಂಸದ ಪ್ರತಾಪಸಿಂಹ ಅವರು ಮಾಡುತ್ತಿದ್ದಾರೆಂದರು.
