ನಿಮ್ಮ ಘನಂದಾರಿ ಆಡಳಿತದಿಂದ ಸಾರಿಗೆ ನಿಗಮಗಳನ್ನು ಸರ್ವನಾಶ ಮಾಡಿಬಿಟ್ಟರಲ್ಲ ಸ್ವಾಮಿ: ಸಿದ್ದರಾಮಯ್ಯ ವಿರುದ್ಧ BJP ವಾಗ್ದಾಳಿ

admin
1 Min Read

ಬೆಂಗಳೂರು: ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ನಿಮ್ಮ ಅಧಿಕಾರದ ಲಾಲಸೆಗೆ, ದುರಾಡಳಿತಕ್ಕೆ ಜನಸಾಮಾನ್ಯರು ಇನ್ಯಾವ್ಯಾವ ರೀತಿ ಪರದಾಡಬೇಕು, ಇನ್ನೆಷ್ಟು ಕಷ್ಟ ಅನುಭವಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಇದರ ಪರಿಣಾಮವಾಗಿ ರಾಜ್ಯಾದ್ಯಂತ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ.

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಸ್ಸಿಲ್ಲ..ಬಸ್ಸಿಲ್ಲ, ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಬಸ್ಸಿಲ್ಲ. ನೌಕರರು, ಉದ್ಯೋಗಿಗಳು ಕೆಲಸಕ್ಕೆ ಹೋಗಲು ಬಸ್ಸಿಲ್ಲ. ನೆಂಟರಿಷ್ಟರ ಮನೆಗಳಿಗೆ, ಶುಭ ಸಮಾರಂಭಗಳಿಗೆ, ಸಾವು-ನೋವಿಗೆ ಹೋಗಲು ಬಸ್ಸಿಲ್ಲ. ಇದು ಬಹುಪಾಲು ಕನ್ನಡಿಗರ ಇವತ್ತಿನ ಬವಣೆ ಎಂದು ವಿವರಿಸಿದ್ದಾರೆ.

Share This Article
Leave a Comment