ಡಾ.ಭೈರಪ್ಪಗೆ ಸುತ್ತೂರು ಶ್ರೀ ಸಂತಾಪ

Pratheek
1 Min Read

ಪಬ್ಲಿಕ್ ಅಲರ್ಟ್

ಮೈಸೂರು: ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಅವರ ಅಗಲಿಕೆ ವಿಷಾದದ ಸಂಗತಿ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಡಾ. ಭೈರಪ್ಪನವರು 13ನೇ ವಯಸ್ಸಿಗೇ ಗಾಂಧೀಜಿಯವರ ಆದರ್ಶಗಳಿಂದ ಆಕರ್ಷಿತರಾಗಿ ಸ್ವಾತಂತ್ರ‍್ಯ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದವರು. ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ ಸತ್ಯ ಮತ್ತು ಸೌಂದರ್ಯ ಎಂಬ ವಿಷಯದಲ್ಲಿ ಮಹಾಪ್ರಬಂಧ ರಚಿಸಿ ಡಾಕ್ಟರೇಟ್ ಪಡೆದಿದ್ದರು.
ವೃತ್ತಿಯಲ್ಲಿ ಉಪನ್ಯಾಸಕರಾಗಿ ಹುಬ್ಬಳ್ಳಿಯ ಪಿ.ಸಿ. ಜಾಬಿನ್ ಕಾಲೇಜು, ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಆಳವಾದ ಸಂಶೋಧನೆ, ಅಧ್ಯಯನಗಳ ಹಿನ್ನೆಲೆಯುಳ್ಳ ಮಹತ್ವದ ಕಾದಂಬರಿಗಳನ್ನು ರಚಿಸಿದ್ದರು. ಬಹುಮುಖ ವ್ಯಕ್ತಿತ್ವ ಹೊಂದಿದ್ದ ಡಾ. ಭೈರಪ್ಪನವರ ಅಗಲುವಿಕೆ ನಿಜಕ್ಕೂ ತುಂಬಲಾರದ ನಷ್ಟ ಎಂದು  ತಿಳಿಸಿದ್ದಾರೆ.

Share This Article
Leave a Comment