ನಾಳೆ ಚಾಮರಾಜವತಿಯಿಂದ ಸೆ.3ಕ್ಕೆ ಧರ್ಮಸ್ಥಳ ಪಾದಯಾತ್ರೆ

Pratheek
1 Min Read

ಪಬ್ಲಿಕ್ ಅಲರ್ಟ್

ಮೈಸೂರು:ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಹಾಗೂ ಅಲ್ಲಿನ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಬೆಂಬಲ ಸೂಚಿಸಿ ಮೈಸೂರು ನಗರ ಕಾಂಗ್ರೆಸ್ ಸಮಿತಿ ಚಾಮರಾಜ ಕ್ಷೇತ್ರದ ವತಿಯಿಂದ ಸೆ. ೩ ರಂದು ಧರ್ಮಸ್ಥಳ ಯಾತ್ರೆ ಕೈಗೊಂಡಿರುವುದಾಗಿ ಅಧ್ಯಕ್ಷ ರವಿ ಮಂಚೇಗೌಡನಕೊಪ್ಪಲು ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ಅಂದು ಬೆಳಗ್ಗೆ ೭ಕ್ಕೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಶಾಸಕ ಕೆ. ಹರೀಶ್‌ಗೌಡ ಚಾಲನೆ ನೀಡಲಿದ್ದಾರೆ. ಸುಮಾರು ೩೦ ಬಸ್‌ಗಳಲ್ಲಿ ಹತ್ತಿರ ಹತ್ತಿರ ಎರಡು ಸಾವಿರ ಜನ ಪ್ರಯಾಣ ಬೆಳೆಸಲಿದ್ದಾರೆ. ಅಂಧು ಮಧ್ಯಾಹ್ನ ಧರ್ಮಸ್ಥಳ ತಲುಪಿ ವಾಸ್ತವ್ಯ ಹೂಡಿ, ಮಾರನೇ ದಿನ ಬೆಳಗ್ಗೆ ೮.೩೦ಕ್ಕೆ ಅಲ್ಲಿ ಧರ್ಮಾಧಿಕಾರಿಗಳ ಪರ ಶಾಂತಿಯಾತ್ರೆ ನಡೆಸಿ ಬಳಿಕ ಮೈಸೂರಿಗೆ ವಾಪಸಾಗಲಿದ್ದಾರೆಂದರು.
ಕೆಲವು ವರ್ಷಗಳಿಂದ ಧಾರ್ಮಿಕ ಕ್ಷೇತ್ರ, ಧರ್ಮಾಧಿಕಾರಿಗಳ ವಿರುದ್ಧ ಕೆಲ ಯೂಟ್ಯೂಬರ್‌ಗಳು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಭಕ್ತರ ಮನಸ್ಸಿಗೆ ನೋವುಂಟು ಮಾಡಿದೆ. ಅನಾಮಿಕ ನೀಡಿದ ದೂರಿನ ಮೇರೆಗೆ ಕಾಂಗ್ರೆಸ್ ಸರ್ಕಾರ ಎಸ್‌ಐಟಿ ರಚಿಸಿ ತನಿಖೆ ಪಾರದರ್ಶಕವಾಗಿ ನಡೆದಿದೆ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಸಂದೇಶಗಳನ್ನು ಹಲವರು ಬಿತ್ತುತ್ತಿರುವುದು ಸರಿಯಲ್ಲ. ಹೀಗಾಗಿ ಇದನ್ನು ಖಂಡಿಸಿ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ ಬೆಂಬಲ ಸೂಚಿಸಿ ಈ ಧರ್ಮಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ. ಇದೇ ವೇಳೆ ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಧರ್ಮಸ್ಥಳ ಯಾತ್ರೆ ಕೈಗೊಳ್ಳುತ್ತಿದ್ದಾರೆಂದು ಆರೋಪಿಸಿದರು.
ಯೋಗೇಶ್, ಅನಂತ ನಾರಾಯಣ, ರಾಮಚಂದ್ರ ಹಾಗೂ ಇನ್ನಿತರರು ಇದ್ದರು.

TAGGED:
Share This Article
Leave a Comment