ಇಂದು ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ

Pratheek
1 Min Read

ಪಬ್ಲಿಕ್ ಅಲರ್ಟ್

ಮೈಸೂರು: ನಗರ (ಜಿಲ್ಲಾ) ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಸೆ.೨ರಂದು ಜಿಲ್ಲಾ ಪದಾಧಿಕಾರಿಗಳ ಸಭೆ, ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ರಘುರಾಜೇ ಅರಸು ಹೇಳಿದರು.
ಅಂದು ಬೆಳಗ್ಗೆ ೧೦ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ  ವಿನಯ್ ಕುಮಾರ್ ಸೊರಕೆ ಅವರು ಆಗಮಿಸಿ, ಮುಂದಿನ ತಾಪಂ,ಜಿಪಂ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಗೆಲುವಿಗೆ ಸಲಹೆ ನೀಡುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ವೇಳೆಯ ಪ್ರಚಾರ ಸಮಿತಿ ಉಪಾಧ್ಯಕ್ಷ ಕೋಟೆ ಎಂ.ಶಿವಣ್ಣ, ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಕಾಂಗ್ರೆಸ್‌ನ ನಗರ ಅಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಿಗಮ ಮಂಡಳಿ ಅಧ್ಯಕ್ಷರು, ಶಾಸಕರು,ಮಾಜಿ ಶಾಸಕರು, ಮಾಜಿ ಮೇಯರ್‌ಗಳು, ನಗರ ಪಾಲಿಕೆ ಮಾಜಿ ಸದಸ್ಯರು,ಮುಖಂಡರು ಆಗಮಿಸುವರು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪ್ರಚಾರ ಸಮಿತಿ ಗ್ರಾಮಾಂತರ ಅಧ್ಯಕ್ಷ ರವಿ ಮಾವಿನಹಳ್ಳಿ ಮತ್ತಿತರರು ಇದ್ದರು.

Share This Article
Leave a Comment