ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸಲು ಸಲಹೆ: ರವಿ ಶಾಸ್ತ್ರಿ

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು: ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣಮಿತ್ರ ಮಂಡಳಿ ಹಾಗೂ ಶ್ರೀ ಕೃಷ್ಣ ಟ್ರಸ್ಟ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಕ್ಕಳಿಗೆ ಆಯೋಜಿಸಿದ ಛದ್ಮಾವೇಷ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಕ್ಕಳು ಕೃಷ್ಣರಾಧೆ ವೇಷ ಭೂಷಣ ಧರಸಿ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು.
ಸ್ಪರ್ಧಿಸಿದ ಮಕ್ಕಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ  ನೀಡಲಾಯಿತು. ನಂತರ ಶ್ರೀ ಕೃಷ್ಣ ಲೀಲೋತ್ಸವ ಹಾಗೂ ರಾಜಬೀದಿಯಲ್ಲಿ ಶ್ರೀ ಕೃಷ್ಣನ ಭವ್ಯ ಮಾರವಣಿಗೆಯನ್ನು ಭಜನೆ ಹಾಗೂ ವಿವಿಧ ಕಲಾತಂಡಗಳಿಂದ ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ
ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷ ರವಿಶಾಸ್ತ್ರಿ ಮಾತನಾಡಿ, ನಾವು ಒಳ್ಳೆಯ ಸಂಸ್ಕೃತಿ ಮತ್ತು ಸಂಪ್ರದಾಯ ಬೆಳೆಸಿಕೊಳ್ಳಬೇಕು. ಇಂತಹ ಕಾರ್ಯಕ್ರಮಗಳನ್ನು ಪ್ರತಿಯೊಂದು ಮಠಗಳು ಹಾಗೂ ಕೆಲವು ಶಾಲೆಯಲ್ಲಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಮಕ್ಕಳಿಗೆ ಶ್ರೀಕೃಷ್ಣನ ಜನ್ಮದ ಬಗ್ಗೆ ತಿಳಿಸಿದರು.
ಮಕ್ಕಳಿಗೆ ನಮ್ಮ ಸಂಸ್ಕೃತಿ, ಆಚಾರ, ವಿಚಾರ ಗಳನ್ನು ಪರಿಚಯಿಸಬೇಕು. ಇದರಿಂದ ಅವರು ಸುಸಂಸ್ಕೃತರಾಗಿ ಬೆಳೆಯಲು ಸಹಕಾರಿ ಆಗುತ್ತದೆ. ಶ್ರೀಕೃಷ್ಣನ ಬಾಲ್ಯದ ಲೀಲೆಗಳು ‌ಸಂಸ್ಕೃತಿಯಲ್ಲಿ ಮಿಳಿತವಾಗಿದ್ದು ಪ್ರತಿಯೊಬ್ಬರನ್ನು ಆಕರ್ಷಿಸುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾರ್ಯದರ್ಶಿ ಕೆ.ವಿ.ಶ್ರೀಧರ್, ಶ್ರೀ ಕೃಷ್ಣಮಿತ್ರ ಮಂಡಳಿ ಅಧ್ಯಕ್ಷ ಗೋಪಾಲಕೃಷ್ಣನ್,  ಉಪಾಧ್ಯಕ್ಷ ಶ್ರೀವತ್ಸ ರಾವ್,  ಕಾರ್ಯದರ್ಶಿ ಪಿ.ಜಿ.ಗುರುಪ್ರಸಾದ್, ರಾಘವೇಂದ್ರ ರಾವ್, ಪುರಾಣಿಕ್, ಮೋಹನ್, ಸುಬ್ರಹ್ಮಣ್ಯ ತಂತ್ರಿ ಹಾಗೂ ಇನ್ನಿತರರು ಹಾಜರಿದ್ದರು.

Share This Article
Leave a Comment