ಛಾಯಾಗ್ರಾಹಕದ ಚಿತ್ರ ಪ್ರದರ್ಶನಕ್ಕೆ ಚಾಲನೆ

Pratheek
1 Min Read

 ಪಬ್ಲಿಕ್  ಅಲರ್ಟ್


ಮೈಸೂರು: ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಕಲಾಮಂದಿರದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಆಯೋಜಿಸಿದ್ದ “ದಸರಾ ಛಾಯಾಚಿತ್ರ ಪ್ರದರ್ಶನಕ್ಕೆ” ಚಾಲನೆ ನೀಡಿದರು. ಈ ವೇಳೆ ಶಾಸಕರಾದ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಸಂಘದ ಅಧ್ಯಕ್ಷ ಪ್ರಗತಿ ಗೋಪಾಲಕೃಷ್ಣ, ಉಪಾಧ್ಯಕ್ಷ ಮಧುಸೂದನ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಯಾದವ್, ಕಾರ್ಯಕಾರಿ ಸಮಿತಿ ಸದಸ್ಯರಾದ ಅನುರಾಗ್ ಬಸವಣ್ಣ, ಉದಯ್ ಶಂಕರ್, ಕೆ.ಚಂದ್ರು, ನಾಗೇಶ್ ಪಣತ್ತಲೆ, ರವಿ ಗವಿಮಠ, ಕೃಷ್ಣೋಜಿರಾವ್, ಅನೂಪ್ ಸೇರಿ ಮುಂತಾದವರು ಉಪಸ್ಥಿತರಿದ್ದರು.

Share This Article
Leave a Comment