ಪಬ್ಲಿಕ್ ಅಲರ್ಟ್
ಮೈಸೂರು: ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರಿಗೆ ಪ್ರತ್ಯೇಕವಾದ ಟೌನ್‌ಶಿಫ್, ಪ್ರತಿ ಕುಟುಂಬಕ್ಕೆ ಒಂದು ಸೂರು ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಜಿ.ಟಿ.ದೇವೇಗೌಡ ಭರವಸೆ ನೀಡಿದರು.
ಬೋಗಾದಿ ಪಟ್ಟಣ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಿ, ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿಮಾತನಾಡಿದರು.ಪೌರ ಕಾರ್ಮಿಕರು ಹೆಚ್ಚಾಗಿರುವ ಪ್ರದೇಶಗಳು ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಇವೆ. ರಾಮಬಾಯಿನಗರ,ಗೊರೂರು,ಮಂಡಕಳ್ಳಿ ಪ್ರದೇಶಗಳು ಇವೆ. ಈ ಬಡಾವಣೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಮಾಡಿದ್ದೇನೆ. ಅದೇ ರೀತಿ ದೇವರು ನನಗೆ ಶಕ್ತಿ ನೀಡಿದರೆ ಮುಂದಿನ ದಿನಗಳಲ್ಲಿ ಪೌರ ಕಾರ್ಮಿಕರಿಗೆ ಪ್ರತ್ಯೇಕವಾದ ಟೌನ್‌ಶಿಫ್, ಪ್ರತಿ ಕುಟುಂಬಕ್ಕೆ ಒಂದು ಸೂರು ಇರುವಂತೆ ಮಾಡಬೇಕು ಎನ್ನುವ ಆಸೆ ಇದೆ ಎಂದರು. ಬೋಗಾದಿ ವ್ಯಾಪ್ತಿಯಲ್ಲಿ ಸೂಕ್ತ ಜಾಗವನ್ನು ಹುಡುಕಿ ಸುಂದರವಾದ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ಈ ಬಗ್ಗೆ ಸರ್ಕಾರಿ ಭೂಮಿಯನ್ನು ಹುಡುಕುವಂತೆ ಮುಖ್ಯಾಧಿಕಾರಿಗಳಿಗೆ ಸಲಹೆ ನೀಡಿದರು.
ಬೋಗಾದಿ ಸೇರಿದಂತೆ ಅನೇಕ ಬಡಾವಣೆಗಳಿಗೆ ಕುಡಿಯುವ ನೀರು ಒದಗಿಸಲುಉಂಡುವಾಡಿ ಯೋಜನೆ ಕಾಮಗಾರಿ ನಡೆಯುತ್ತಿದೆ ಎಂದರುನಿಮ್ಮ ಕರ್ತವ್ಯದಿಂದಾಗಿ ಪರಿಸರ,ಸ್ವಚ್ಛತೆ ಕಾಣುತ್ತಿದ್ದೇವೆ. ಪೌರ ಕಾರ್ಮಿಕರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಸ್ವಚ್ಛತೆ ಕಾಪಾಡುತ್ತಿರುವುದು ಸಂತೋಷ ತಂದಿದೆ. ಸಾರ್ವಜನಿಕರಿಂದ ಒಂದು ದೂರು ಬರದಂತೆ ಕೆಲಸ ಮಾಡುತ್ತಿರುವುದರಿಂದ ಗೌರವಿಸುವೆ. ಕ್ಲಿಷ್ಟಕರ ಸನ್ನಿವೇಶದಲ್ಲಿ ಬೋಗಾದಿ ಪಟ್ಟಣ ಪಂಚಾಯಿತಿಯನ್ನಾಗಿ ಮಾಡಿಸಲಾಯಿತು. ಪೌರ ಕಾರ್ಮಿಕರು ತಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು. ಕ್ರೀಡೆ ಚಟುವಟಿಕೆಯಲ್ಲಿ ತೊಡಗಿರುವುದು ಸಂತೋಷವಾಗಿದೆ ಎಂದರು.
ಟಿಎಪಿಸಿಎಂ ಎಸ್ ಚಂದ್ರಶೇಖರ್,ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ವಿ. ಪ್ರಿಯದರ್ಶಿನಿ, ಮುಖ್ಯಾಧಿಕಾರಿ ಸುಜೈ ಹಾಜರಿದ್ದರು.
