ಪಬ್ಲಿಕ್ ಅಲರ್ಟ್
ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿರುವ ಪ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ರಾತ್ರಿ ಘಟನೆ ಸಂಭವಿಸಿದೆ.
ಗ್ರಾಮದಲ್ಲಿ ಅವಳಡಿಸಿದ್ದ ಅಂಬೇಡ್ಕರ್ ಪ್ಲೆಕ್ಸ್ ಅರಿದು ಹಾಕಿರುವ ಕಿಡಿಗೇಡಿಗಳ ವಿರುದ್ದ ಗ್ರಾಮಸ್ಥರು ದಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.
ಅಂಬೇಡ್ಕರ್ ಅವರ ಪ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಅವಮಾನಿಸಿದ್ದಲ್ಲದೆ, ಗ್ರಾಮದಲ್ಲಿರುವ ಲುಂಬಿನಿ ಬುದ್ಧವಿಹಾರದಲ್ಲಿ ಬುದ್ಧರ ಪ್ರತಿಮೆಯನ್ನು ಹೊಡೆದು ಹಾಕಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಹಾಗೂ ಪೂರ್ವ ಠಾಣಾ ಪೊಲೀಸರು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಸಂಬಂಧ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕೃತ್ಯಕ್ಕೆ ಕಾರಣರಾದವರನ್ನು ಪತ್ತೆ ಹಚ್ಚಿ ಶೀಘ್ರದಲ್ಲಿ ಬಂಧಿಸಿ ಕ್ರಮ ಕೈಗೊಳ್ಳಲಾಗವುದು ಎಂದು ಎಸ್ಪಿ ಕವಿತಾ ತಿಳಿಸಿದ್ದಾರೆ.
