ಐದು ವರ್ಷ ಸಿದ್ದರಾಮಯ್ಯ ಸಿಎಂ ಘೋಷಣೆಗೆ ಪತ್ರ ಚಳವಳಿ

Pratheek
2 Min Read

ಪಬ್ಲಿಕ್ ಅಲರ್ಟ್

ಮೈಸೂರು: ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಘೋಷಿಸುವಂತೆ ಆಗ್ರಹಿಸಿ ಮೈಸೂರಿನ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಸದಸ್ಯರು ನಗರದ ರಾಮಸ್ವಾಮಿ ವೃತ್ತದ ಬಳಿ ಇಂದು ಪತ್ರ ಚಳುವಳಿ ನಡೆಸಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಅಧ್ಯಕ್ಷ ಶಿವರಾಂ ನೇತೃತ್ವದಲ್ಲಿ ನವೆಂಬರ್ನಲ್ಲಿ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ 30ಕ್ಕೂ ಹೆಚ್ಚು ಮಂದಿ ಸದಸ್ಯರು ನಗರದ ರಾಮಸ್ವಾಮಿ ವೃತ್ತದಲ್ಲಿರುವ ಅಂಚೆ ಪೆಟ್ಟಿಗೆ ಬಳಿ ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿ ಎಂದು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ಆಗ್ರಹಿಸಿದರು. ಕೆ.ಎಸ್.ಶಿವರಾಂ ಮಾತನಾಡಿ, “ಸಿಎಂ ಬದಲಾಗುತ್ತಾರೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಗೊಂದಲ ಸೃಷ್ಟಿ ಮಾಡುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ರೀತಿ ಹೇಳಿಕೆಗಳಿಂದ ಸಿದ್ದರಾಮಯ್ಯನವರ ವರ್ಚಸ್ಸಿಗೆ ಧಕ್ಕೆ ಉಂಟುಮಾಡುತ್ತಿದ್ದಾರೆ. ಈ ಅವಧಿಯಲ್ಲಿ ಸಿದ್ದರಾಮಯ್ಯನವರು ಎರಡೂವರೆ ವರ್ಷ ಚೆನ್ನಾಗಿ ಆಡಳಿತ ನಡೆಸಿದ್ದಾರೆ” ಎಂದರು.
“ಕಾಂಗ್ರೆಸ್ ಹೈಕಮಾಂಡ್ ಈ ಕೂಡಲೇ ಮಧ್ಯಪ್ರವೇಶ ಮಾಡಿ ಗೊಂದಲ ನಿವಾರಿಸಬೇಕು. ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿರುತ್ತಾರೆ ಅಂತ ಹೇಳಬೇಕು. ಹಿಂದಿನಿಂದಲೂ ಅಹಿಂದ ಸಮಾಜ ಕಾಂಗ್ರೆಸ್ ಪಕ್ಷದೊಂದಿಗಿದೆ. ಸಿದ್ದರಾಮಯ್ಯನವರನ್ನು ಬದಲಾಯಿಸದರೆ ಅಹಿಂದ ಸಮಾಜ ಕಾಂಗ್ರೆಸ್ ಜೊತೆ ನಿಲ್ಲುವುದಿಲ್ಲ. ರಾಹುಲ್ ಗಾಂಧಿಯವರು ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಹೇಳಿ ಗೊಂದಲಕ್ಕೆ ತೆರೆ ಎಳೆಯಬೇಕು” ಎಂದು ಒತ್ತಾಯಿಸಿದರು. ರಾಹುಲ್‍ ಗಾಂಧಿ ಅವರೇ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ನೆಲೆ ತುಂಬಾ ಭದ್ರವಾಗಿದೆ ಅದಕ್ಕೆ ಮೂಲ ಕಾರಣ ಸಿದ್ದರಾಮಯ್ಯ ರವರ ಆಡಳಿತ ಜನಪರ ಗ್ಯಾರಂಟಿ ಯೋಜನೆ ನಿರ್ವಹಣೆ ಅಹಿಂದ ಸಮುದಾಯಗಳ ಮೇಲೆ ಅವರು ಇಟ್ಟಿರುವ ಪ್ರೀತಿ ಕಾಳಜಿ ಸಾಮಾಜಿಕ ನ್ಯಾಯ ಪರ ಸಿದ್ಧಾಂತ ಶೋಷಿತ ಸಮುದಾಯಗಳಿಗೆ ನೀಡುತ್ತಿರುವ ಕೊಡುಗೆಗಳು ಸಮುದಾಯಗಳಿಗೆ ಗಟ್ಟಿಧ್ವನಿ ಯಾಗಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಆಡಳಿತ ನಡೆಸುತ್ತಿದ್ದಾರೆ. ನಿಮ್ಮನ್ನು ಭೇಟಿ ಮಾಡಲು ಕರ್ನಾಟಕದ ಅಹಿಂದ ನಾಯಕರುಗಳು ನಿಯೋಗ ಆಗಮಿಸುತ್ತಿದ್ದು ಸಮಯವನ್ನು ನಿಗದಿ ಮಾಡಿಕೊಳ್ಳಲು ಮನವಿ ಮಾಡುತ್ತೇವೆ ಎಂದು ತಿಳಿಸಿದರು.
ಪತ್ರ ಚಳುವಳಿಯಲ್ಲಿ ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷರಾದ ಎಚ್‌.ಎಸ್.ಪ್ರಕಾಶ್‌ ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷ ರವೀನಂದನ್‍, ಜಿಲ್ಲಾ ಉಪ್ಪಾರರ ಸಂಘದ ಅಧ್ಯಕ್ಷ ಯೋಗೇಶ್‍ ಉಪ್ಪಾರ, ದಲಿತ ಮಹಾಸಭಾ ಅಧ್ಯಕ್ಷ ರಾಜೇಶ್‍, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ದೇವಗಳ್ಳಿ ಸೋಮಶೇಖರ್‍, ದಲಿತ ಮುಖಂಡರಾದ ರಾಜಶೇಖರ್‍, ಎಫ್‌.ಎಂ.ಕಲೀಮ್, ರಹೀಮ್‍ ಖಾನ್ ಮಹಮದ್ ಆಲಿ, ಲೋಕೇಶ್‍ಕುಮಾರ್, ಹರೀಶ್ ಮೊಗಣ್ಣ, ಮಂಜುಳಾ ಮಂಜುನಾಥ್, ಛಾಯಾ, ಅನಿಲ್, ನಿಂಗರಾಜು, ಸುನಿಲ್, ನಾರಾಯಣ್‌,ರವಿ, ನಜರ್ಬಾದ್ ದಿನೇಶ್, ಮಹೇಶ್ ಸಂತೋಷ್, ಕಿರಾಳ್ ಕಾಳೇಗೌಡ, ಅಪ್ಪುಗೌಡ, ಕುರುಬರಹಳ್ಳಿ ಪ್ರಕಾಶ್ ಉಪಸ್ಥಿತರಿದ್ದರು

Share This Article
Leave a Comment