ಮಕ್ಕಳಿಗೆ ಶಿಕ್ಷಣ ಕೊಡಿಸುವುದೇ ದೊಡ್ಡ ಆಸ್ತಿ: ಶಾಸಕ ಜಿಟಿಡಿ

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು: ಮಕ್ಕಳಿಗೆ ಶಿಕ್ಷಣ ಕೊಡಿಸುವುದೇ ಪೋಷಕರು ದೊಡ್ಡ ಆಸ್ತಿ ಮಾಡಿದಂತಾಗಲಿದೆ. ಏನೇ ಆಸ್ತಿ-ಪಾಸ್ತಿ ಹೊಂದಿದ್ದರೂಶಿಕ್ಷಣ ಕಲಿಯದಿದ್ದರೆ ಸ್ವತಂತ್ರವಾಗಿ ಬದುಕು ಸಾಗಿಸಲು ಸಾಧ್ಯವಿಲ್ಲ. ಗ್ರಾಮೀಣ ಪ್ರದೇಶದ ಮಕ್ಕಳು ಉನ್ನತ ವ್ಯಾಸಂಗ ಪಡೆದು ಉತ್ತಮ ಪ್ರಜೆಗಳಾಗಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಎಂದರು.
ಹೂಟಗಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಮೈಸೂರು ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಇಲಾಖೆಯಿಂದ ಆಯೋಜಿಸಿದ್ದ ೨೦೨೫-೨೬ನೇ ಸಾಲಿನ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ತಪಾಸಣೆ ಹಾಗೂ ಮೌಲ್ಯಾಂಕನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಪೋಷಕರು ಎಷ್ಟೇ ಕಷ್ಟವಾದರೂ ಮಕ್ಕಳ ಆರೋಗ್ಯವನ್ನು ಕಾಪಾಡುವ ಜತೆಗೆ ಶಿಕ್ಷಣ ಕೊಡಿಸಬೇಕು. ಶಿಕ್ಷಣವೇ ಮಕ್ಕಳಿಗೆ ದೊಡ್ಡ ಆಸ್ತಿ. ಡಾ.ಬಿ.ಆರ್.ಅಂಬೇಡ್ಕರ್,ಜ್ಯೋತಿಬಾಪುಲೆ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದ್ದರು. ಇಂದು ಶಿಕ್ಷಣ ಕಲಿಯದಿದ್ದರೆ ಸಮಸ್ಯೆಯಾಗಲಿದೆ. ಶಿಕ್ಷಣ ಅಂದರೆ ಓದು ಬರೆಯುವುದು ಅಲ್ಲ. ಸಂಸ್ಕಾರಯುತ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಹೇಳಿದರು.
ಜೆ.ಕೆ.ಟೈರ್ಸ್‌ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಲಾಯಿತು. ಹೂಟಗಳ್ಳಿ ಗ್ರಾಮದ ಮುಖಂಡ ಸುರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಲೇಗೌಡ, ಮುಖ್ಯ ಶಿಕ್ಷಕ ದುಂಡಯ್ಯ, ವೈದ್ಯ ಚೇತನ, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಸಂಗೀತ, ಎಸ್‌ಡಿಎಂಸಿ ಅಧ್ಯಕ್ಷ ಲೋಕೇಶ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸತೀಶ್, ಜೆ.ಕೆ.ಟೈರ್ಸ್‌ನ ಜಗದೀಶ್ ಮತ್ತಿತರರು ಹಾಜರಿದ್ದರು.

Share This Article
Leave a Comment