ಪಬ್ಲಿಕ್ ಅಲರ್ಟ್ ನ್ಯೂಸ್:-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗ “ಬೆಂಗಳೂರು ಹಬ್ಬ 2026 ನ್ನು ಉದ್ಘಾಟನೆ ಮಾಡಿ, ಜನಪದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಚಲನಚಿತ್ರ ನಟ ಶಿವರಾಜ್ ಕುಮಾರ್, ನಟಿ ಜಯಮಾಲಾ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಸೇರಿ ಹಲವು ದಿಗ್ಗಜರು ಉಪಸ್ಥಿತರಿದ್ದರು.
