ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

ಫ್ರೀಡಂಪಾರ್ಕ್ ನಲ್ಲಿ “ಮನರೇಗಾಬಚಾವೋ ಆಂದೋಲನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ*

ಮನ್ ರೇಗಾ ಯೋಜನೆಯಲ್ಲಿ ರಾಮ ಅನ್ನೋ ಹೆಸರು ಬರುವ ರೀತಿ ಯೋಜನೆ ಮಾಡಿದ್ದಾರೆ. ದಶರಥ ರಾಮ ಇಲ್ಲ ಕೌಶಲ್ಯ ರಾಮ ಇಲ್ಲ ಸೀತಾ ರಾಮ ಸಹ ಇಲ್ಲ. ಈ ಕಾಯ್ದೆಯಲ್ಲಿ ರಾಮ ಇಲ್ಲ. ಬಡವರು ದಲಿತರು, ರೈತರ ಬಗ್ಗೆ ಚಿಂತಿಸುವುದು ಕಾಂಗ್ರೆಸ್ ಮಾತ್ರ. ಬಡವರ ಬಗ್ಗೆ ಮಾತಾಡುವುದು ಕಾಂಗ್ರೆಸ್ ಮಾತ್ರ

RSS ಮಾರ್ಗದರ್ಶನದಂತೆ ಬಡವರ ಕಾರ್ಯಕ್ರಮಗಳನ್ನ ಬಿಜೆಪಿಯವರು ರದ್ದು ಮಾಡಿದ್ದಾರೆ*

ಆರ್ ಎಸ್ ಎಸ್ ನವರಿಗೆ ಬಡವರು ಮುಖ್ಯವಾಹಿನಿಗೆ ಬರುವುದು ಬೇಕಾಗಿಲ್ಲ. ಬಡವರು ಬಡವರಾಗಿಯೇ ಉಳಿದು ಸದಾಕಾಲ ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ ಸಿದ್ಧಾಂತ

ಬಡವರ ವಿರೋಧಿ ಬಿಜೆಪಿ ಬಡವರ ಪರವಾದ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಗೊಳಿಸುತ್ತಿದೆ ಎಂದು ಸಿದ್ದರಾಮಯ್ಯ ಅವರು ಆಕ್ರೋಶ ಹೊರ ಹಾಕಿದರು

(ಭಾಷಣದ ವಿವರವಾದ ಕಾಪಿ ಬರಲಿದೆ)

Share This Article
Leave a Comment