ಪಬ್ಲಿಕ್ ಅಲರ್ಟ್ ನ್ಯೂಸ್:-ಫೆ.14ರಂದು ಬೃಹತ್ ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣ: 45 ಸಾವಿರ ಆಸನ, ಸೂಕ್ತ ಪೊಲೀಸ್ ಬಂದೋಬಸ್ತ್
ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವತಿಯಿಂದ ಫೆಬ್ರವರಿ 14ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಬೃಹತ್ ‘ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣ’ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆದಿವೆ. ಈ ಬೃಹತ್ ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಗಳು ಮತ್ತು ಕೈಗೊಂಡಿರುವ ವ್ಯವಸ್ಥೆಗಳ ಕುರಿತು ಇಂದು ಶಾಸಕರಾದ ಹರೀಶ್ ಗೌಡ, ಕಾಂಗ್ರೆಸ್ ಮುಖಂಡರಾದ ರಾಜೀವ್ ಹಾಗೂ ಗಣಪತಿ ಸಚ್ಚಿದಾನಂದ ಆಶ್ರಮದ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ನೀಡಿದರು.
ವ್ಯವಸ್ಥೆ ಮತ್ತು ಭದ್ರತೆಯ ವಿವರಗಳು:
ಕಾರ್ಯಕ್ರಮಕ್ಕೆ ಬರುವ ಭಕ್ತರ ಸಂಖ್ಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯಾವುದೇ ಲೋಪವಾಗದಂತೆ ಸಕಲ ವ್ಯವಸ್ಥೆ ಮಾಡಲಾಗಿದೆ.
ಪೊಲೀಸ್ ಬಂದೋಬಸ್ತ್: ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ, ಸುರಕ್ಷತೆ ಮತ್ತು ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ.
ಅನ್ನ ಪ್ರಸಾದ ವ್ಯವಸ್ಥೆ: ಅನ್ನಪ್ರಸಾದಕ್ಕೆ ಯಾವುದೇ ಲೋಪ ಆಗದಂತೆ ಕ್ರಮ ಕೈಗೊಂಡಿದ್ದು ಪಾರಾಯಣ ಸ್ಥಳದಲ್ಲೇ ಅನ್ನಪ್ರಸಾದ ನೀಡಲು ವ್ಯವಸ್ಥೆಗೆ ಕಲ್ಪಿಸಲಾಗಿದೆ.
ಮೈದಾನದ ಪೂರ್ಣ ಬಳಕೆ: ಮಹಾರಾಜ ಕಾಲೇಜು ಮೈದಾನದ ಪೂರ್ತಿ ಭಾಗಕ್ಕೆ
ಶಾಮಿಯಾನ (ಪೆಂಡಾಲ್) ಅಳವಡಿಸಲಾಗಿದೆ.
45,000 ಆಸನಗಳು: ಭಕ್ತರಿಗೆ ಅನುಕೂಲವಾಗುವಂತೆ ಸುಮಾರು 45,000 ಕುರ್ಚಿಗಳನ್ನು
ಹಾಕಲಾಗಿದೆ.
800 ಸ್ವಯಂ ಸೇವಕರು: ಭಕ್ತರಿಗೆ ಮಾರ್ಗದರ್ಶನ ನೀಡಲು ಮತ್ತು ವ್ಯವಸ್ಥೆ ನಿರ್ವಹಿಸಲು 800 ಮಂದಿ ಸ್ವಯಂ ಸೇವಕರು ಕಾರ್ಯನಿರ್ವಹಿಸಲಿದ್ದಾರೆ.
ಮೂಲಸೌಕರ್ಯ: ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯ ಹಾಗೂ ಪ್ರವೇಶ ದ್ವಾರದಲ್ಲಿಯೇ ನೀರಿನ ಬಾಟಲ್ ವಿತರಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ವಾಹನ ಪಾರ್ಕಿಂಗ್:
ಕಾರ್ಯಕ್ರಮಕ್ಕೆ ಆಗಮಿಸುವವರ ವಾಹನ ನಿಲುಗಡೆಗೆ ಅರಸು ಬೋರ್ಡಿಂಗ್ ಶಾಲೆ ಹಾಗೂ ಯುವರಾಜ ಕಾಲೇಜು ಆವರಣದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಶಾಸಕರು ಮನವಿ ಮಾಡಿದರು.
ಇದಲ್ಲದೆ 10 ಶಾಮಕ ವಾಹನ ಹಾಗೂ ಆಂಬುಲೆನ್ಸ್ ವ್ಯವಸ್ಥೆಗಳನ್ನು ಸಹ ಏರ್ಪಡಿಸಲಾಗಿದೆ.
