ಮೈಸೂರಿನಲ್ಲಿ ಆಯೋಜಿಸಿರುವ 38ನೇ ಅಖಿಲ ಭಾರತ ಅಂಚೆ ಸಾಂಸ್ಕೃತಿಕ ಸಮಾರಂಭ-2026

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಮೈಸೂರಿನಲ್ಲಿ ಆಯೋಜಿಸಿರುವ 38ನೇ ಅಖಿಲ ಭಾರತ ಅಂಚೆ ಸಾಂಸ್ಕೃತಿಕ ಸಮಾರಂಭ-2026

ಅಂಚೆ ಇಲಾಖೆಯು ತನ್ನ ಸಿಬ್ಬಂದಿಗಳಲ್ಲಿ ಸಾಂಸ್ಕೃತಿಕ ಶ್ರೇಷ್ಠತೆ ಹಾಗೂ ಸಮಗ್ರ ಕಲ್ಯಾಣವನ್ನು ಉತ್ತೇಜಿಸುವ ಉದ್ದೇಶದಿಂದ 38ನೇ ಅಖಿಲ ಭಾರತ ಅಂಚೆ ಸಾಂಸ್ಕೃತಿಕ ಸಮಾರಂಭ (ಎಐಪಿಸಿಎಂ)-2026 ವನ್ನು ಆಯೋಜಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಈ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮವು ದೇಶದಾದ್ಯಂತ ಅಂಚೆ ನೌಕರರ ನಡುವೆ ಸಾಂಸ್ಕೃತಿಕ ಸ್ಪರ್ಧೆ, ಸ್ನೇಹಭಾವ, ಏಕತೆ ಹಾಗೂ ಒಗ್ಗಟ್ಟಿನ ಮನೋಭಾವನೆ ಬೆಳೆಸುವ ಗುರಿಯನ್ನು ಹೊಂದಿದೆ.
ಕರ್ನಾಟಕ ಅಂಚೆ ವೃತ್ತವು ದಿನಾಂಕ 16 ರಿಂದ 20 ಫೆಬ್ರವರಿ 2026ರ ವರೆಗೆ ಮೈಸೂರಿನ ಅಂಚೆ ತರಬೇತಿ ಕೇಂದ್ರ (PTC), ಮೈಸೂರು ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಆವರಣದಲ್ಲಿ 38ನೇ ಎಐಪಿಸಿಎಂ-2026 ಯನ್ನು ಆಯೋಜಿಸುತ್ತಿರುವುದು ಸಂತಸದ ವಿಷಯವಾಗಿದೆ. ಈ ಸಾಂಸ್ಕೃತಿಕ ಸಮಾರಂಭದಲ್ಲಿ ವಿವಿಧ ರೀತಿಯ ಪ್ರದರ್ಶನಗಳ ಮೂಲಕ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲಾಗುತ್ತಿದ್ದು, ಅಂಚೆ ಇಲಾಖೆಯೊಳಗಿನ ಸೃಜನಶೀಲತೆ, ಪರಂಪರೆ ಮತ್ತು ಒಗ್ಗಟ್ಟಿನ ಮನೋಭಾವವನ್ನು ಪ್ರಮುಖವಾಗಿ ಪ್ರದರ್ಶಿಸಲಾಗುತ್ತದೆ.

ದೇಶದ ವಿವಿಧ ಭಾಗಗಳಿಂದ 21 ಅಂಚೆ ವೃತ್ತಗಳನ್ನು ಪ್ರತಿನಿಧಿಸುವ ಒಟ್ಟು 335 ಸಿಬ್ಬಂದಿಗಳು ಮತ್ತು ಅವರ ಮಕ್ಕಳು ಈ ಐದು ದಿನಗಳ ಸಾಂಸ್ಕೃತಿಕ ಸಮಾರಂಭದಲ್ಲಿ ಭಾಗವಹಿಸಲಿದ್ದು, ಇದು ಅಂಚ ನೌಕರರ ನಡುವೆ ರಾಷ್ಟ್ರೀಯ ಏಕೀಕರಣ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಮಹತ್ವದ ವೇದಿಕೆಯಾಗಲಿದೆ.

Share This Article
Leave a Comment