ಪಬ್ಲಿಕ್ ಅಲರ್ಟ್ ನ್ಯೂಸ್:-ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಅಪರ ಜಿಲ್ಲಾಧಿಕಾರಿ ಭೇಟಿ ,ಪರಿಶೀಲನೆ
ನಗರದ ಮರಿಮಲ್ಲಪ್ಪ ಪ್ರೌಢಶಾಲೆ /ಕಾಲೇಜಿನಲ್ಲಿ ನಡೆಯುತ್ತಿರುವ ದ್ವಿತೀಯ ಪಿ.ಯು.ಸಿ.ಪರೀಕ್ಷೆಯ ಪರೀಕ್ಷಾ ಕೇಂದ್ರಕ್ಕೆ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ರವರು ಇಂದು ಭೇಟಿ ನೀಡಿ ವಿಧ್ಯಾರ್ಥಿಗಳಿಗೆ ಕಲ್ಪಿಸಿರುವ ಅವಶ್ಯಕ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ ಪ್ರಾಂಶುಪಾಲರಿಗೆ ಅಗತ್ಯ ಮಾರ್ಗದರ್ಶನ ನೀಡಿದರು.
ಜಿಲ್ಲೆಯಲ್ಲಿ ಎಲ್ಲಾ ಕಡೆಯು ದ್ವಿತೀಯ ಪಿಯುಸಿ ಪರೀಕ್ಷೆಗಳು ಸುಸೂತ್ರವಾಗಿ ನಡೆಯುತ್ತಿರುವುದಾಗಿ ಖಾತ್ರಿ ಪಡಿಸಿಕೊಳ್ಳಲಾಯಿತು.
ಇಂದು ರಾಜ್ಯಾದ್ಯಂತ ಸಮಾಜಶಾಸ್ತ್ರ, ಗಣಕಶಾಸ್ತ್ರ, ಜೀವಶಾಸ್ತ್ರ ವಿಷಯಗಳ ಪರೀಕ್ಷೆ ನಡೆಸಲಾಗಿದೆ.
ಪ್ರಾಂಶುಪಾಲರು, ಪರೀಕ್ಷಾ ವೀಕ್ಷಕರು, ಹಾಜರಿದ್ದರು.
