ಪಬ್ಲಿಕ್ ಅಲರ್ಟ್ ನ್ಯೂಸ್:-ವಿಶೇಷ ಸ್ವಾತಿ ನಕ್ಷತ್ರ ಪೂಜೆ
ಮೈಸೂರು: ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವ ಸ್ಥಾನದಲ್ಲಿ ಗುರುವಾರದಂದು ಶ್ರೀ ಸ್ವಾಮಿಗೆ ವಿಶೇಷ ಸ್ವಾತಿ ನಕ್ಷತ್ರ ಪೂಜೆ ನಡೆಯಿತು.
ದೇವಾಲಯದ ಸಂಸ್ಥಾಪಕರೂ ಆದ ನಾಡೋಜ ಪ್ರೊ. ಭಾಷ್ಯಂ ಸ್ವಾಮೀಜಿ ಅವರ ನೇತೃತ್ವದಲ್ಲಿ ಬೆಳಗಿನಿಂದಲೇ ಮಹಾಮಂಗಳಾರತಿ ಸೇರಿದಂತೆ, ಇನ್ನಿತರ ವಿಶೇಷ ಪೂಜಾ ಕೈಂಕರ್ಯ ಜರುಗಿತು.
ನೂರಾರು ಭಕ್ತರು ದೇಗುಲಕ್ಕೆ ಆಗಮಿಸಿ, ದೇವರ ದರ್ಶನ ಪಡೆದು, ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾದರು. ಬಳಿಕ ಎಲ್ಲಾ ಭಕ್ತಾದಿಗಳಿಗೂ ಪ್ರಸಾದ ವಿತರಿಸಲಾಯಿತು.
ವಿಶೇಷವಾಗಿ ಮಾಜಿ ಸಚಿವರೂ ಹಾಗೂ ಬಿಜೆಪಿ ಪಕ್ಷದ ಹಾಲಿ ಶಾಸಕರೂ ಆದ ಅಶ್ವಥ್ ನಾರಾಯಣ್ ಅವರು ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯಕ್ಕೆ ಆಗಮಿಸಿ ಶ್ರೀ ಸ್ವಾಮಿಯ ದರ್ಶನ ಪಡೆದು, ಸ್ವಾತಿ ನಕ್ಷತ್ರದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.
ತದನಂತರ ದೇವಾಲಯಕ್ಕೆ ಬಂದಂತಹ ಭಕ್ತಾದಿಗಳಿಗೆ ತಾವೇ ಸ್ವತ: ಪ್ರಸಾದ ವಿತರಿಸಿದರು. ಈ ವೇಳೆ ದೇಗುಲದ ಪ್ರಧಾನ ಅರ್ಚಕರಾದ ಶೇಷಾದ್ರಿ, ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಇನ್ನಿತರರು ಉಪಸ್ಥಿತರಿದ್ದರು.
ವಿಶೇಷ ಸ್ವಾತಿ ನಕ್ಷತ್ರ ಪೂಜೆಮೈಸೂರು: ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವ ಸ್ಥಾನದಲ್ಲಿ
Leave a Comment
Leave a Comment
