ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಕೆಂಪೇಗೌಡ ಜಯಂತಿ ವೇಳೆ ನಡೆದ ಘಟನೆಯನ್ನು ವಿವರಿಸಿದರು.

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಕೆಂಪೇಗೌಡ ಜಯಂತಿ ವೇಳೆ ನಡೆದ ಘಟನೆಯನ್ನು ವಿವರಿಸಿದರು

ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂವನ್ನು ನಿಂದಿಸಿದ್ದನ್ನು ವಿವರಿಸಿ ಪ್ರದೀಪ್ ಅವರು ಕಣ್ಣೀರು ಹಾಕಿದರು.

ಪ್ರದೀಪ್ ಅವರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಅವರು, ರಾಜಕಾರಣದಲ್ಲಿ ಇಂಥಹ ಘಟನೆಗಳು ಸಾಮಾನ್ಯ. ಇಂಥವನ್ನು ಎದುರಿಸಬೇಕು. ಇದರಿಂದ ಧೃತಿಗೆಡಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದರು.

ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ತಿಳಿಸಿದರು.

ಪೋಲೀಸರ ಸಮ್ಮುಖದಲ್ಲೇ ಅದರಲ್ಲೂ ಆಡಳಿತ ಪಕ್ಷದ ಶಾಸಕರಿಗೆ ಈ ರೀತಿ ಆಗಿರುವುದರ ಬಗ್ಗೆ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು.
ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕ್ರಮ ಜರಗಿಸಬೇಕು ಎಂದರು.

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವರಾದ ಮಧು ಬಂಗಾರಪ್ಪ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

Share This Article
Leave a Comment