ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision-SIR)

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision-SIR)

ಮೈಸೂರು ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಾರಂಭಗೊಂಡಿದ್ದು, ಈ ಸಂಬಂಧ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರು ಹಾಗೂ ಮಾನ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಸೆಲ್ವಕುಮಾರ್ ರವರು ಜಿಲ್ಲೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಕಾರ್ಯದ ಪ್ರಸ್ತುತ ಹಂತದ ಗಣಿಕೆ ನಮೂನೆ (Enumeration Form – EF)ಗಳನ್ನು ಮತದಾರರಿಗೆ ಹಂಚಿಕೆ ಮಾಡುವ ಕಾರ್ಯದ ಕುರಿತು ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ ಹಾಗೂ ಮತದಾರರ ನೋಂದಣಾಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.

ಯಾವುದೇ ಅರ್ಹ ಮತದಾರರ ಮತದಾರರ ಪಟ್ಟಿಯಿಂದ ಕೈಬಿಟ್ಟುಹೋಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

217-ಚಾಮರಾಜ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 06 ಗೋಕುಲಂ – ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ ಗಣಿಕೆ ನಮೂನೆ (Enumeration Form – EF)ಗಳನ್ನು ವಿತರಣೆ ಮಾಡುತ್ತಿರುವ ಕಾರ್ಯದ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಲಕ್ಷ್ಮೀಕಾಂತ್ ರೆಡ್ಡಿ ರವರು ಹಾಗೂ ಮೈಸೂರು ಮಹಾನಗರಪಾಲಿಕೆಯ ಉಪ ಆಯುಕ್ತರು, ವಲಯ ಆಯುಕ್ತರು, ಕಂದಾಯ ಸಿಬ್ಬಂದಿ ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment