ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್;-ಮಾಧ್ಯಮ ಕಾರ್ಯದರ್ಶಿಗಳಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

ಬೆಂಗಳೂರು:
ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಪಿ. ತ್ಯಾಗರಾಜ್, ಜಯಪ್ರಕಾಶ್ ಹಾಗೂ ರಾಘವೇಂದ್ರ ಭಟ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಅಭಿನಂದನೆ ಸಲ್ಲಿಸಿದೆ.

ಇವರ ಅವಧಿಯಲ್ಲಿ ಮಾಧ್ಯಮ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ಕ್ರಮಗಳು ಜಾರಿಯಾಗಲಿ ಹಾಗೂ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸಕ್ಕೆ ಹೆಚ್ಚಿನ ಆದ್ಯತೆ ದೊರೆಯಲಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಶುಭ ಹಾರೈಸಿದ್ದಾರೆ.

ಸರ್ಕಾರ ಮತ್ತು ಮಾಧ್ಯಮಗಳ ನಡುವೆ ಸಮನ್ವಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮೂವರು ಮಾಧ್ಯಮ ಕಾರ್ಯದರ್ಶಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ, ಪತ್ರಕರ್ತರ ಹಿತಾಸಕ್ತಿಗೆ ಸಹಕಾರಿಯಾಗುವ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

Share This Article
Leave a Comment