ಗಜ ಪಯಣಕ್ಕೆ ಅದ್ದೂರಿಯಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಗಜ ಪಯಣಕ್ಕೆ ಅದ್ದೂರಿಯಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಮೈಸೂರು ಆಗಸ್ಟ್ 26 (ಕರ್ನಾಟಕ ವಾರ್ತೆ) ಮೈಸೂರು ದಸರಾ 2026 ರ ಗಜ ಪಯಣಕ್ಕೆ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಯತೀಂದ್ರ ಸಿದ್ದರಾಮಯ್ಯ ಅವರು ವೀರನಹೊಸಹಳ್ಳಿ ಬಳಿ ಚಾಲನೆ ನೀಡಿದರು.

ಮೊದಲ ಹಂತದಲ್ಲಿ 9 ಆನೆ ಗಳಾದ ಮಹೇಂದ್ರ, ಶ್ರೀಕಂಠ, ಲಕ್ಷ್ಮೀ, ಏಕಲವ್ಯ, ಧನಂಜಯ, ಗೋಪಿ, ಕಾವೇರಿ, ಪ್ರಶಾಂತ, ಶ್ರೀರಾಮ ಆನೆಗಳು ಮೈಸೂರು ದಸರಾಗೆ ಆಗಮಿಸಿದವು.

ಕಳೆದ ಕೆಲವು ವರ್ಷಗಳಿಂದ ಅಂಬಾರಿ ಹೊತ್ತು, ಪ್ರಸ್ತುತ ನಿವೃತ್ತಿ ಆಗಿರುವ ಅಭಿಮನ್ಯುವಿಗೆ ಗೌರವಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಅರಣ್ಯ ವಸತಿ ವಿಹಾರಧಾಮಗಳ ಅಧ್ಯಕ್ಷರು ಹಾಗೂ ಹೆಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್ ಸಿ, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಡಿ ಹರೀಶ್ ಗೌಡ, ಕೆ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಾದ ಡಿ ರವಿಶಂಕರ್, ವಿಧಾನ ಪರಿಷತ್ ಸದಸ್ಯರಾದ ಸಿ ಎನ್ ಮಂಜೇಗೌಡ, ಪ್ರದೇಶಿಕ ಆಯುಕ್ತರಾದ ನಿತೀಶ್ ಪಾಟೀಲ್, ದಕ್ಷಿಣ ವಲಯದ ಐ ಜಿ ಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್ ಯುಕೇಶ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment