18 ವರ್ಷ ತುಂಬಿದ ಯುವ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿ : ಸಿ.ಎಸ್.ಕರುಣಾಕರ್

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-18 ವರ್ಷ ತುಂಬಿದ ಯುವ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿ : ಸಿ.ಎಸ್.ಕರುಣಾಕರ್

ಮೈಸೂರು, ಸೆ.19 (ಕರ್ನಾಟಕ ವಾರ್ತೆ):-
:ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳು ಸಾರ್ವಜನಿಕರಿಗೆ ಲಭ್ಯವಿದ್ದು, ನಾಗರಿಕರು ಆಕ್ಷೇಪಣೆಗಳ ಅರ್ಜಿಗಳನ್ನು ಸಲ್ಲಿಸಬಹುದು. 18 ವರ್ಷ ತುಂಬಿದ ಅರ್ಹ ಯುವ ಮತದಾರರು ಕೂಡ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಿ ಎಂದು ಸಹಾಯಕ ನಿರ್ದೇಶಕ(ಗ್ರಾ.ಉ)ರಾದ ಸಿ.ಎಸ್.ಕರುಣಾಕರ್ ಅವರು ತಿಳಿಸಿದರು.

ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಸ್ ಐಆರ್ ಭಾಗವಾಗಿ ನಾಗರಿಕರು ತಮ್ಮ ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಆಕ್ಷೇಪಣೆ ಹಾಗೂ ತಿದ್ದುಪಡಿ ಮಾಡಿಸಲು ಸೆ.19 ಮತ್ತು 20 ರಂದು ನಡೆಯುವ “ಸಾರ್ವಜನಿಕ ವಿಶೇಷ ಅಭಿಯಾನ” ನಡೆಯುತ್ತಿದೆ ಎಂದರು.

ಅರ್ಹ ನಾಗರಿಕರ ಹೆಸರನ್ನು ಸೇರಿಸಲು ಮತ್ತು ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಎಸ್ ಐಆರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಈ ಕುರಿತು ಪೋಷಕರು ಹಾಗೂ ಸುತ್ತಮುತ್ತಲಿನವರಿಗೆ ಮಾಹಿತಿ ನೀಡಿ ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಭೇಟಿ ನೀಡಿ, ತಮ್ಮ ಹೆಸರನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳಿದ್ದರೆ ಮಾಡಿಸಿಕೊಳ್ಳಬಹುದು ಎಂದು ಹೇಳಿದರು.

ನಿಗದಿತ ಸಮೂನೆ ಪಡೆದು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಪಟ್ಟಿಯಿಂದ ಹೆಸರು ತೆಗೆದುಹಾಕಲು ಹಾಗೂ ಮತದಾರರ ಚೀಟಿಯಲ್ಲಿನ ತಿದ್ದುಪಡಿಗಳು ಮತ್ತು ವಿಳಾಸ ಬದಲಾವಣೆಗೆ ಮಾಡಬಹುದು ಎಂದು ಮಾಹಿತಿ ನೀಡಿದರು.

ಸಹಾಯಕ ಪ್ರಾಧ್ಯಾಪಕರಾದ ಡಾ.ಮಂಜು ಅವರು ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಯುತ್ತಿದ್ದು, ಅದರ ಭಾಗವಾಗಿ ಇದೇ ಶನಿವಾರ ಮತ್ತು ಭಾನುವಾರ ವಿಶೇಷ ಅಭಿಯಾನ ನಡೆಯುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಶ್ವನಾಥ್ ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳಾದ ಸಂತೋಷ, ಸೋಮಶೇಖರ್, ಐಇಸಿ ಸಂಯೋಜಕ ರವಿಕುಮಾರ್, ಸಹಾಯಕ ಪ್ರಾಧ್ಯಾಪಕರಾದ ನಂಜುಂಡಸ್ವಾಮಿ, ವಿಶ್ವನಾಥ್ ಸೇರಿದಂತೆ ಇತರರು ಹಾಜರಿದ್ದರು.

Share This Article
Leave a Comment