ಪಬ್ಲಿಕ್ ಅಲರ್ಟ್ ನ್ಯೂಸ್:-ವಿಶೇಷ ಅಭಿಯಾನ ಜಾಥಾ : ಡಿಸಿ ಮತ್ತು ಸಿಇಒ ಅವರಿಂದ ಚಾಲನೆ
ಪಿರಿಯಾಪಟ್ಟಣ : ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)-2026ರ ಅಂಗವಾಗಿ ವಿಶೇಷ ಅಭಿಯಾನ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್.ಯುಕೇಶ್ ಕುಮಾರ್ ಹಾಗೂ ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತ ರೆಡ್ಡಿ ಜಿ. ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಸಂಜೀವಿನಿ ಒಕ್ಕೂಟದ ಮಹಿಳೆಯರು ಹಾಗೂ MRW,VRW ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಜಾಥಾವು ತಾಲ್ಲೂಕು ಪಂಚಾಯಿತಿ ಆವರಣದಿಂದ ಮೈಸೂರು-ಮಡಿಕೇರಿ ಮುಖ್ಯ ರಸ್ತೆಯಲ್ಲಿ ಸರ್ಕಾರಿ ಆಸ್ಪತ್ರೆವರೆಗೆ ಸಾಗಿ ಬಳಿಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಮುಕ್ತಾಯಗೊಂಡಿತು.
ಈ ಸಂದರ್ಭ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಿ.ಬಿ.ಸುನೀಲ್ ಕುಮಾರ್, ತಹಶೀಲ್ದಾರ್ ನಿಸರ್ಗ ಪ್ರಿಯ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ಕರುಣಾಕರ್ ಸೇರಿದಂತೆ ತಾಲೂಕು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.
