ಪಬ್ಲಿಕ್ ಅಲರ್ಟ್
ಮೈಸೂರು: ಬಿಹಾರ್ ಚುನಾವಣೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗುತ್ತದೆ. ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ಮೈಸೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಅವರ ಶಕ್ತಿ ಪ್ರದರ್ಶನ ನಡೆಸಿದರು. ಸಿದ್ದರಾಮಯ್ಯ ರ್ಯಾಂಪ್ ವಾಕ್ ಮಾಡುತ್ತಾ ಇದ್ದರೂ. ಆಗ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಇಬ್ಬರೂ ಅಡ್ರೆಸ್ ಗೆ ಇರಲಿಲ್ಲ. ಕಾಂಗ್ರೆಸ್ ಶಾಸಕರೇ ನವೆಂಬರ್ ಕ್ರಾಂತಿ ಎಂದು ಹೇಳುತ್ತಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಮತನಾಡಬೇಡಿ ಎಂದು ವೇಣುಗೋಪಾ್ ಹೇಳುತ್ತಾರೆ. ಅದನ್ನ ಹೈ ಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳುತ್ತಾರೆ. ಆದರೆ ಹೈಕಮಾಂಡ್ ಎಲ್ಲೂ ನಾಯಕತ್ವ ಬದಲಾವಣೆ ಇಲ್ಲಾ ಎಂದು ಹೇಳುತ್ತಿಲ್ಲವೆಂದರು.
ಜಾತಿ ಸಮೀಕ್ಷೆ ಗೊಂದಲ ವಿಚಾರವಾಗಿ ಪ್ರತಿಕ್ರಿಯಿಸಿ, ಸಮೀಕ್ಷೆಯಲ್ಲಿ ಎಷ್ಟು ಗೊಂದಲ ಇದೆ ಎಂಬುದನ್ನ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೋಡಿದರೆ ಗೊತ್ತಾಗುತ್ತದೆ. 60 ಪ್ರಶ್ನೆ ಜನರ ಮುಂದಿಟ್ಟಿದ್ದಾರೆ. ಈ ಸಮೀಕ್ಷೆಯಿಂದ ಗೊಂದಲಗಳೆ ಹೆಚ್ಚು, ರಾಜ್ಯ ಸರ್ಕಾರ ಪೂರ್ವ ತಯಾರಿ ಇಲ್ಲದೆ ಆತುರದ ನಿರ್ಧಾರ ತೆಗೆದುಕೊಂಡಿದೆ. ವಿಶೇಷ ಚೇತರನ್ನು ಸೇರಿಸಿಕೊಂಡಿರುವುದಕ್ಕೆ ಟೀಕೆಗಳು ವ್ಯಕ್ತವಾಗುತ್ತಿದೆ. ಸಿದ್ದರಾಮಯ್ಯಗೆ ಆತರ ಯಾಕೆ ಎಂಬುದೇ ಪ್ರಶ್ನೆ ಎಂದರು


ನವೆಂಬರ್ ಕ್ರಾಂತಿ ಎಂದು ಕಾಂಗ್ರೆಸ್ ನಲ್ಲಿ ಚರ್ಚೆ ನಡಿತಿದೆ. ನವೆಂಬರ್ ಕ್ರಾಂತಿಗೂ ಜಾತಿ ಗಣತಿ ಕ್ರಾಂತಿಗೂ ಸಂಬಂಧ ಇರವಂತೆ ಚರ್ಚೆ ನಡೆಯುತ್ತಿದೆ. ಸಮಾಜದ ಕಟ್ಟಕಡೆತ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕು. ಇದು ನಮ್ಮ ಪಕ್ಷದ ನಿಲುವಾಗಿದೆ. ದೇಶಗಳಲ್ಲಿ ಜಾತಿ ಗಣತಿ ಮಾಡುತ್ತೇವೆ ಎಂದು ಪ್ರಧಾನ ಮಂತ್ರಿ ಘೋಷಣೆ ಮಾಡಿದ್ದಾರೆ. ಈ ನಡುವೆ ರಾಜ್ಯದಲ್ಲಿ ಈತರ ಗೊಂದಲ ಸೃಷ್ಟಿಮಾಡುವ ಅವಶ್ಯಕತೆ ಇರಲಿಲ್ಲ.
ಸಿದ್ದರಾಮಯ್ಯ ಬಹಳ ಆತುರದಿಲ್ಲಿದ್ದಾರೆ.
