ಪಬ್ಲಿಕ್ ಅಲರ್ಟ್
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೌದ್ಧ ಸಮ್ಮೇಳನ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಗಳಲ್ಲಿಯೂ ಬೌದ್ಧ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ ಎಂದು ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದರು.
ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೌದ್ದ ಮಹಾಸಮ್ಮೇಳನ ಪ್ರತಿ ವರ್ಷ ಒಂದೊಂದು ಜಿಲ್ಲೆಯಲ್ಲಿ ನಡೆಯಲಿದೆ. ಇದೊಂದು ರಾಜಕೀಯೇತರ ಕಾರ್ಯಕ್ರಮವಾಗಿದೆ. ೪೦ ಪುಟಗಳ ೨೯೮ಕ್ಕೂ ಹೆಚ್ಚು ಗಣ್ಯರನ್ನು ಆಹ್ವಾನದ ಪತ್ರಿಕೆ ಮೇರೆಗೆ ಶೇ.೯೮ರಷ್ಟು ಗಣ್ಯರು ಭಾಗಿಯಾಗಿದ್ದರು. ಇದೊಂದು ಚಾರಿತ್ರಿಕ ಮತ್ತು ಐತಿಹಾಸಿಕ ಕಾರ್ಯಕ್ರಮವಾಗಿ ದಾಖಲಾಗಿದೆ. ನಿರೀಕ್ಷೆಗೂ ಮೀರಿ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಸಮ್ಮೇಳನ ೩೧ ಜಿಲ್ಲೆಗಳಲ್ಲಿಯೂ ನಡೆಸಲಾಗುವುದು. ಎಲ್ಲಾ ಜಿಲ್ಲೆಗಳಲ್ಲಿ ಬಿಕ್ಕು ಸಂಘಗಳನ್ನು ವಿಸ್ತರಿಸಲಾಗುವುದು. ಸಮ್ಮೇಳನಕ್ಕೆ ಸ್ವಯಂಪ್ರೇರಿತರಾಗಿ ಜನರು ಆಗಮಿಸಿದರು. ಈ ಸಮ್ಮೇಳನಕ್ಕೆ ಪರೋಕ್ಷ ಮತ್ತು ಪ್ರತ್ಯಕ್ಷವಾಗಿ ಸಹಕರಿಸಿದ ಎಲ್ಲರಿಗೂ ಪುರುಷೋತ್ತಮ್ ಕೃತಜ್ಞತೆ ಸಲ್ಲಿಸಿದರು.
ಮುಖಂಡರಾದ ಮಹೇಶ್, ಸೋಮಯ್ಯ ಮಳೆಯೂರು, ಮಂಜುನಾಥ್, ರಾಮಣ್ಣ, ಅಶೋಕ್ ಇತರರು ಸುದ್ದಿಗೋಷ್ಟಿಯಲ್ಲಿ ಇದ್ದರು.
