ಅ.೧೪, ೧೫ ಭೌದ್ಧ ಮಹಾಸಮ್ಮೇಳನ

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು: ಮೈಸೂರಿನಲ್ಲಿ  ಕರ್ನಾಟಕ ರಾಜ್ಯ ಬಿಕ್ಕು ಸಂಘ, ರಾಜ್ಯ ಬೌದ್ಧ ಸಂಘ-ಸಂಸ್ಥೆ,  ರಾಜ್ಯ ಅಂಬೇಡ್ಕರ್ ವಾದಿ ಸಂಘ-ಸಂಸ್ಥೆಗಳು ಮತ್ತು ವಿಶ್ವ ಮೈತ್ರಿ ಬುದ್ಧವಿಹಾರದ ವತಿಯಿಂದ ಅ.೧೪, ೧೫ರಂದು ಬೌದ್ಧ ಮಹಾ ಸಮ್ಮೇಳನ ಮಾನವ ಮೈತ್ರಿ ಆಯೋಜಿಸಲಾಗಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್  ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೧೦.೩೦ಕ್ಕೆ  ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮ್ಮೇಳನ ನಡೆಯಲಿದ್ದು, ಅ.೧೪, ೧೫ರಂದು ಎರಡು ದಿನಗಳು ಅಂತರರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ ಸಂಗಮದ ಮೂಲಕ ಮಾನವ ಮೈತ್ರಿಯ ಪಯಣವನ್ನು ಹಮ್ಮಿಕೊಂಡಿದ್ದು, ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಬಿಕ್ಕುಗಳನ್ನು ಗೌರವಿಸಲಾಗುತ್ತದೆ ಎಂದರು.
ಧ್ಯಾನ, ಚಿಂತನೆ ಮತ್ತು ವಿಚಾರಗಳನ್ನೊಳಗೊಂಡ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಅಂಬೇಡ್ಕರ್  ಅವರಂತೆ ದೇಶದಾದ್ಯಂತ ಬೌದ್ಧ ಚಿಂತನೆಗಳನ್ನು ಬಿತ್ತುತ್ತಾ ಸಾಗುತ್ತಿರುವ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಬಿಕ್ಕುಗಳು, ಧಮ್ಮ ಮಹಾಮಾತ್ರರು, ಬೌದ್ಧ ಚಿಂತಕರು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಮ್ಮೇಳನಕ್ಕೆ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಬೇಕಿತ್ತು. ಆದರೆ, ಅವರ ಅನಾರೋಗ್ಯದ ಕಾರಣ ಸಾಧ್ಯವಾಗಿಲ್ಲ. ಆರೋಗ್ಯ ಸರಿಯಾದರೆ ಅವರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸುನೀಲ್ ಬೋಸ್ ಸೇರಿದಂತೆ ಎಲ್ಲಾ ಜನ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮನೋರಖ್ಖಿತ ಭಂತೇಜಿ, ಬೋಧಿರತ್ನ ಭಂತೇಜಿ, ಡಾ.ಕಲ್ಯಾಣಸಿರಿ ಭಂತೇಜಿ, ಸುಗತಪಾಲ ಭಂತೇಜಿ ಮತ್ತಿತರರು ಉಪಸ್ಥಿತರಿದ್ದರು.

Share This Article
Leave a Comment