ಪಬ್ಲಿಕ್ ಅಲರ್ಟ್
ಮೈಸೂರು: ಜಿಲ್ಲಾಡಳಿತ, ಮೈಸೂರು ಜಿಲ್ಲಾ ಕೊರಮ-ಕೊರಚ ಮಹಾಸಂಘದ ಸಂಯುಕ್ತಾಶ್ರಯದಲ್ಲಿ ಆ.೩೧ ರಂದು ಮಧ್ಯಾಹ್ನ ೧೨ ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಶರಣ ಶ್ರೀ ನುಲಿಯ ಚಂದಯ್ಯರವರ ೯೧೮ನೇ ಜಯಂತಿ ಮಹೋತ್ಸವವನ್ನು ಆಯೋಜಿಸಲಾಗಿದೆ ಎಂದು ಮೈಸೂರು ಜಿಲ್ಲಾ ಕೊರಮ-ಕೊರಚ ಮಹಾಸಂಘದ ಅಧ್ಯಕ್ಷ ಡಿ.ಎನ್.ಮುತ್ತುರಾಜು ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿ ನಡೆಸಿದ ಅವರು, ಜಯಂತಿ ಮಹೋತ್ಸವವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದು, ಕಾರ್ಮಿಕ ಸಚಿವರಾದ ಸಂತೋಷ್ ಎಸ್.ಲಾಡ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶರಣ ಶ್ರೀ ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಪುಷ್ಪಾರ್ಚನೆ ನೆರವೇರಸಲಿದ್ದು, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಹಾಗೆಯೇ ಸ್ಥಳೀಯ ಶಾಸಕರು, ಸಂಸದರು, ನಿಗಮ ಮಂಡಳಿ ಅಧ್ಯಕ್ಷರುಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ವಕೀಲರು ಹಾಗೂ ಸಂಶೋಧಕರಾದ ಕಿರಣ್ ಕುಮಾರ್ ಕೊತ್ತಗೆರೆ ಉಪನ್ಯಾಸ ನೀಡಲಿದ್ದು, ಸರ್ಕಾರಿ ಹುದ್ದೆಗಳಲ್ಲಿ ಉನ್ನತ ಸ್ಥಾನದಲ್ಲಿ ಸಾರ್ವಜನಿಕ ಸೇವೆ ಮಾಡುತ್ತಿರುವ ಆರು ಮಂದಿ ಹಿರಿಯ ಅಧಿಕಾರಿಗಳನ್ನು ಸನ್ಮಾನಿಸಲಾಗುವುದು. ಹಾಗೆಯೇ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಕಳೆದ ಸಾಲಿನಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಕೊರಮ-ಕೊರಚ ಸಮುದಾಯ ೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಗುವುದು ಎಂದರು.
ಅಸAಘಟಿತ ಪರಿಶಿಷ್ಟ ಜಾತಿ ಅಲೆಮಾರಿ ಕೊರಮ-ಕೊರಚ ಸಮುದಾಯ ಗುರುಗಳಾದ ಶರಣ ನುಲಿಯ ಚಂದಯ್ಯ ಅವರ ಜಯಂತಿ ಮಹೋತ್ಸವವನ್ನು ಕಳೆದ ನಾಲ್ಕು ವರ್ಷಗಳಿಂದ. ಸರ್ಕಾರದ ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ಜಿಲ್ಲೆಯ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಪರಿಶಿಷ್ಟ ಜಾತಿ ಒಳಮೀಸಲಾತಿ ಹಂಚಿಕೆಯಲ್ಲಿ ಅಸಂವಿಧಾನಿಕ ಪದ ಬಳಕೆ: ಸಂಘದ ಕಾರ್ಯಾಧ್ಯಕ್ಷ ಪಿ.ನಾಗರಾಜ್ ಮಾತನಾಡಿ, ನ್ಯಾ.ನಾಗಮೋಹನ್ ದಾಸ್ ಅವರ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆ ಆಧಾರದ ಮೇಲೆ ರಾಜ್ಯ ಸರ್ಕಾರ ಶೆ.೧೭ ರಷ್ಟು ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಶೇ.೬ ರಷ್ಟು, ಎಡಗೈ ಸಮುದಾಯಕ್ಕೆ ಶೇ.೬ ರಷ್ಟು ಹಾಗೂ ಕೊರಮ, ಕೊರಚ, ಬೋವಿ, ಲಂಬಾಣಿ ಸೇರಿದಂತೆ ೬೩ ಸ್ಪöÈಶ್ಯ ಸಮುದಾಯಗಳಿಗೆ ಶೆ.೫ ರಷ್ಟು ಒಳ ಮೀಸಲಾತಿ ಹಂಚಿಕೆ ಮಾಡಿದೆ. ಆದರೆ, ಅಸ್ಪಶ್ಯ ಎಂಬುದೇ ಅಸಂವಿಧಾನ ಪದವಾಗಿದ್ದು, ವಿಮುಕ್ತ, ಅಲೆಮಾರಿ ಮತ್ತು ಸೂಕ್ಣ÷್ಮ ಸಮುದಾಯಗಳೆಂದು ಪರಿಗಣಿಸುವಂತೆ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಹಿಳಾಧ್ಯಕ್ಷೆ ಟಿ.ವೇದಾವತಿ, ಜಂಟಿ ಕಾರ್ಯದರ್ಶಿ ಎನ್.ರವಿಕುಮಾರ್, ಖಜಾಂಚಿ ಸೋಮಣ್ಣ ರಂಗಸಮುದ್ರ, ಉಪಾಧ್ಯಕ್ಷ ರಮೇಶ್ ಸಾತಗಳ್ಳಿ, ಮುಖಂಡ ಲೋಹಿತ್ ಉಪಸ್ಥಿತರಿದ್ದರು.