ಮೈಸೂರು: ಮೈಸೂರಿನ ಸೆಂಟ್ ಜೋಸೆಫ್ ಸೆಂಟ್ರಲ್ ಶಾಲೆಯಲ್ಲಿ ಶ್ರೇಯಾ ಎಂಬ ಪುಟಾಣಿ ಅನುಪಯುಕ್ತ ಪ್ಲಾಸ್ಟಿಕ್ ವಸ್ತುಗಳ ಮೂಲಕ ಪರಿಸರವನ್ನು ಉಳಿಸಿ ಎಂಬ ಜಾಗೃತಿ ಮೂಡಿಸಿ ಸ್ಪರ್ಧೆಯಲ್ಲಿ ಭಾಗಿಯಾಗಿ ಗಮನ ಸೆಳೆದರು.
ಶಾಲೆಯಲ್ಲಿ ಪ್ರತಿ ವರ್ಷದಂತೆ ಮಕ್ಕಳಿಗೆ ವಿವಿಧ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ೨೦ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಮಾತ್ರವಲ್ಲದೆ, ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಲ್ಲದೆ ಮಕ್ಕಳ ಮೂಲಕವೇ ಅರಿವು ಮೂಡಿಸುವ ಪ್ರಯತ್ನವನ್ನು ವಿದ್ಯಾಸಂಸ್ಥೆಯಿಂದ ಆಯೋಜಿಸಿದ್ದು ವಿಶೇಷ.
ಸೆಂಟ್ ಜೋಸೆಫ್ ಶಾಲೆಯಲ್ಲಿ ಗಮನ ಸೆಳೆದ ಪುಟಾಣಿ

Leave a Comment
Leave a Comment