ಮೈಸೂರು ವಿವಿ ಪ್ರಕಟಣೆ ನಿಯಮ ಬಾಹಿರ: ದ್ಯಾವಪ್ಪನಾಯಕ

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು: ಮೈಸೂರು ವಿವಿಯ ಕಾನೂನು ಶಾಲೆ ನಿರ್ದೇಶಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ವಿವಿ ಪ್ರಕಟಣೆ ಹೊರಡಿಸಿರುವುದು ನಿಯಮ ಬಾಹಿರವಾಗಿದೆ. ವಾಸ್ತವವಾಗಿ ಶಾಲೆಯ ಅನುಭವಿ, ಹಿರಿಯರನ್ನೇ ಇದಕ್ಕೆ ನೇಮಕ ಮಾಡಿಕೊಳ್ಳಬೇಕಾಗಿತ್ತು. ಹೀಗಾಗಿ ಈ ನೇಮಕ ಪ್ರಕ್ರಿಯೆ ರದ್ದುಗೊಳಿಸಬೇಕೆಂದು ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ದ್ಯಾವಪ್ಪ ನಾಯಕ ಆಗ್ರಹಿಸಿದರು.
ನಗರದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ನೇಮಕ ಮಾಡಿಕೊಳ್ಳಲು ಸರ್ಕಾರ ಅಥವಾ ಸಿಂಡಿಕೇಟ್ ಅನುಮತಿ ಪಡೆದಿಲ್ಲ ಎಂಬ ಮಾಹಿತಿ ತಮಗೆ ಬಂದಿದೆ. ಯುಜಿಸಿ, ಬಿಸಿಐ ನಿಯಮಾವಳಿ ಪಾಲನೆ ಮಾಡುತ್ತಿಲ್ಲ. ಮೈಸೂರು ವಿವಿ ಈಗಾಗಲೇ ನಿವೃತ್ತ ಪ್ರಾಧ್ಯಾಪಕರಿಗೆ ನಿವೃತ್ತಿ ವೇತನ ನೀಡಲು ಸಾಧ್ಯವಾದಂತಹ ದುಸ್ಥಿತಿಯಲ್ಲಿದೆ. ಹೀಗಿರುವಾಗ ಹೊರಗಿನವರ ನೇಮಕ ಅಗತ್ಯವಿತ್ತೇ ಎಂದು ಪ್ರಶ್ನಿಸಿದರು. ಈ ನೇಮಕಾತಿ ಪ್ರಕ್ರಿಯೆ ಕಾನೂನಿಗೆ ವಿರುದ್ಧವಾದುದಾಗಿದ್ದು, ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವುದು ವಿವಿಗೆ ಹೊರೆಯಾಗಲಿದೆ. ಆದ್ದರಿಂದ ಈ ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸಿ, ಈಗಾಗಲೇ ಶಾಲೆಯಲ್ಲಿ ಕೆಲಸ ಮಾಡುತ್ತಿರುವವರಿಗೆ ನಿರ್ದೇಶಕ ಸ್ಥಾನ ನೀಡಬೇಕು. ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರು ಇತ್ತ ಗಮನ ಹರಿಸಬೇಕು. ಒಂದು ವೇಳೆ ನೇಮಕಾತಿ ಪ್ರಕ್ರಿಯೆ ಮುಂದುವರಿಸಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಹುಣಸೂರು, ಜಿಲ್ಲಾ ಕಾರ್ಯದರ್ಶೀ ಸುರೇಶ್ ಕುಮಾರಬೀಡು, ನಗರ ಅಧ್ಯಕ್ಷ ರಾಜು ಮಾರ್ಕೆಟ್, ಜಿಲ್ಲಾಧ್ಯಕ್ಷ ಶ್ರೀಧರ್ ಚಾಮುಂಡಿಬೆಟ್ಟ, ಮೂರ್ತಿ, ಮಣಿಕಂಠ ಹಾಗೂ ರಮೇಶ್ ಹಾಜರಿದ್ದರು.

Share This Article
Leave a Comment