ಪಬ್ಲಿಕ್ ಅಲರ್ಟ್
ಮೈಸೂರು: ನಗರದ ಸರಸ್ವತಿಪುರಂ ನಲ್ಲಿರುವ ಯೋಗೀನಾರೇಯಣ ಬಣಜಿಗ/ಬಲಿಜ ಸಂಘದವತಿಯಿಂದ ಅ.೧೨ರ ಭಾನುವಾರ ಬೆ.೧೦ಗಂಟೆಗೆ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಧು-ವರರ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಆರ್. ಗೋಪಾಲಕೃಷ್ಣ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಘವು ೧೯೫೮ರಲ್ಲಿ ವಿದ್ಯಾರ್ಥಿನಿಲಯವನ್ನು ಸ್ಥಾಪಿಸಿ ಸಮಾಜದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲ ಕಲ್ಪಿಸಲಾಗಿದೆ. ಇಲ್ಲಿ ವ್ಯಾಸಂಗ ಮಾಡಿದ ಸಾವಿರಾರು ವಿದ್ಯಾರ್ಥಿಗಳು ತಮ್ಮ ಬದುಕನ್ನು ರೂಪಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿದೇಶಗಳಲ್ಲಿಯೂ ನೆಲೆಸಿದ್ದಾರೆ. ಸರ್ಕಾರದ ವಿವಿಧ ಹಂತಗಳಲ್ಲಿ ನೌಕರಿ ಪಡೆದಿದ್ದಾರೆ. ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ಶೈಕ್ಷಣಿಕವಾಗಿ ವಿದ್ಯಾರ್ಥಿಗಳನ್ನು ಪೋತ್ಸಾಹಿಸುವ ಸಲುವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಅದರಂತೆ ಈ ವರ್ಷವೂ ಕೂಡ ಶೇ.೮೫ಕ್ಕಿಂತ ಹೆಚ್ಚು ಅಂಕ ಪಡೆದಿರುವ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಅದೇ ದಿನ ಸಮುದಾಯದ ವಧು-ವರರಿಗೆ ಅನುಕೂಲವಾಗಲೆಂದು ಸಮಾವೇಶ ಮಾಡುತ್ತಿದ್ದು ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಿಂದ ನೋಂದಣಿಗೆ ಹೆಸರುಗಳನ್ನು ನೋಂದಾಯಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಸಂಘದ ಖಜಾಚಿ ಕೆ.ಚಂದ್ರಶೇಖರ್, ನಿರ್ದೇಶಕರಾದ ಬಿ.ಕೆ.ಸುರೇಶ, ಹೆಚ್.ವಿ.ನಾಗರಾಜ ಉಪಸ್ಥಿತರಿದ್ದರು.
