ಪಬ್ಲಿಕ್ ಅಲರ್ಟ್
ಮೈಸೂರು: ಪ್ರಸ್ತುತ ಸಂದರ್ಭದಲ್ಲಿ ಸಂವಿಧಾನದಲ್ಲಿ ಸಾಂದರ್ಭಿಕ ಬದಲಾವಣೆ ಆಗಬೇಕು ಎಂದು ಆಮ್ ಆದ್ಮಿ ಪಾರ್ಟಿಯ ನಾಯಕ ಮುಖ್ಯಮಂತ್ರಿ ಚಂದ್ರು ಹೇಳಿದರು.
ನಗರದ ಯುವರಾಜ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ದಾರಿ ಫೌಂಡೇಷನ್ ಮೈಸೂರು ಹಾಗೂ ಯುವರಾಜ ಕಾಲೇಜಿನ ಸಹಯೋಗದಲ್ಲಿ ಶುಕ್ರವಾರ ನಡೆದ ಭವಿಷ್ಯದಲ್ಲಿ ಪ್ರಜಾಪ್ರಭುತ್ವದ ರಕ್ಷಣೆ ಜವಾಬ್ದಾರಿ ಯುವಶಕ್ತಿಯ ಕೈಯಲ್ಲಿ ಮುಕ್ತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಸವರಾಜು ಬೊಮ್ಮಾಯಿ, ಶಾಮನೂರು ಶಿವಶಂಕರಪ್ಪ, ಮೈಸೂರಿನ ಮಹಾರಾಜರಿಗೆ ಮೀಸಲಾತಿ ಯಾಕೇ ಬೇಕು. ದಿನಗೂಲಿಯಲ್ಲಿ ಬದುಕುತ್ತಿರುವರಿಗೆ ಮೀಸಲಾತಿ ಬೇಕಿದೆ. ಜಾತಿಯ ಆಧಾರದಲ್ಲಿ ಮೀಸಲಾತಿ ಕೊಡುವುದಾದರೆ ಅಯಾ ಸಮುದಾಯದಲ್ಲಿ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಬೇಕು. ಮೀಸಲಾತಿ ಅನುಕೂಲ ಪಡೆದು ಉನ್ನತ ಮಟ್ಟಕ್ಕೆ ಏರಿದವರು, ಲಕ್ಷಾಂತರ ರೂಪಾಯಿ ಸಂಬಳ ತೆಗೆದುಕೊಳ್ಳುವವರಿಗೆ ಮೀಸಲಾತಿ ಕೊಡುವುದಾದರೆ ಬೇರೆಯವರ ಗತಿ ಏನಾಗಬೇಕು ಎಂದು ಪ್ರಶ್ನಿಸಿದರು.
೧೦ ವರ್ಷ ಜೈಲು ಶಿಕ್ಷೆ ಅನುಭವಿಸಿದವ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ. ಶಿಕ್ಷಣ ಇಲ್ಲದವರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುತ್ತಿದ್ದಾರೆ. ಸಂವಿಧಾನ ಈ ಮಟ್ಟಕ್ಕೆ ಬಂದು ತಲುಪಿದೆ. ಹೀಗಾಗಿ ಸಾಂದರ್ಭಿಕವಾಗಿ ಸಂವಿಧಾನದಲ್ಲಿ ಬದಲಾವಣೆ ತರಬೇಕಿದೆ. ಆಗಿರುವ ಅನಾಹುತಗಳನ್ನು ಸರಿಪಡಿಸಬೇಕಿದೆ ಎಂದು ಹೇಳಿದರು.
ಹನ್ನೇರಡನೇ ಶತವಾನದಲ್ಲಿ ಬಸವಣ್ಣನವರು ಅನುಭವ ಮಂಟಪವೇ ಇಂದಿನ ಸಂಸತ್ತು ಎಂದು ಹೇಳುತ್ತೇವೆ. ಆದರೆ ಬಸವಣ್ಣನವರು ಹೇಳಿದ್ದ ಕಲಬೇಡ, ಕೊಲಬೇಡ,. ಹುಸಿಯ ನುಡಿಯಲು ಬೇಡ.. ಈ ವಚನದ ಎಲ್ಲಾ ಸಾಲುಗಳನ್ನು ಅನುಸರಿಸಿದ್ದರೆ ಯಾವುದೇ ಸಮಸ್ಯೆ ಎದುರಾಗುತ್ತಿರಲಿಲ್ಲ. ಈಗ ಪ್ರಜಾಪ್ರಭುತ್ವದ ಹೆಸರಿನಲ್ಲಿ ಸರ್ವಾಧಿಕಾರಿ ನಡೆಯುತ್ತಿದೆ. ಇಡಿ, ಸಿಬಿಐ, ಚುನಾವಣಾ ಆೋಂಗದ ದುರುಪಯೋಗ ನಡೆಯುತ್ತಿದೆ. ಎಲ್ಲಾ ಪಕ್ಷಗಳಲ್ಲೂ ಕುಟುಂಬ ರಾಜಕಾರಣ ನಡೆಯುತ್ತಿದೆ ಎಂದು ವಿಷಾದಿಸಿದರು.
ಜಾತಿ ಗಣತಿಗೆ ವಿರೋಧ ಸರಿಯಲ್ಲ ದೇಶದಲ್ಲಿ ಸಾವಿರಾರು ಜಾತಿಗಳಿವೆ. ಹೀಗಿರುವಾಗ ಸಮಾನತೆ ತರಬೇಕಾದರೆ ಯಾವ್ಯಾವ ಜಾತಿಯವರು ಎಷ್ಟೆಷ್ಟು ಇದ್ದಾರೆ ಎಂಬುದನ್ನು ಪತ್ತೆ ಮಾಡಿ, ಅದರ ಪ್ರಕಾರ ಸೌಲಭ್ಯ ಕಲ್ಪಿಸಬೇಕಾಗಿದೆ. ಇಂದಿಗೂ ಹಲವು ಸಮುದಾಯಗಳಲ್ಲಿ ಒಬ್ಬ ಒಬ್ಬನೇ ಶಾಸಕ, ಸಂಸದನಾಗಿಲ್ಲ. ಗ್ರಾಮಪಂಚಾಯಿತಿ ಸದಸ್ಯನೂ ಆಗಿಲ್ಲ. ಸರ್ಕಾರದ ಸೌಲಭ್ಯಗಳು ತಲುಪುತ್ತಿಲ್ಲ. ಇವರಿಗೆ ಸರ್ಕಾರ ಹೀಗಾಗಿ ಜಾತಿ ಗಣತಿಯನ್ನು ವಿರೋಧಿಸುವುದು ಸರಿುಂಲ್ಲ ಎಂದು ಹೇಳಿದರು.
ವಕೀಲೆ ಎಂ.ಎನ್. ಸುಮನಾ ವಾತನಾಡಿ, ಪ್ರತಿಯೊಬ್ಬರಿಗೂ ಮಹಾತ್ಮಗಾಂಧೀಜಿ ಅವರ ಅಹಿಂಸೆ, ಡಾ.ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ಬಸವಣ್ಣನವರ ಮಾನವ ಧರ್ಮ ಮುಖ್ಯವಾಗಬೇಕು. ವರ್ಣಶ್ರಮ ಪದ್ಧತಿ ಇರುವರಿಗೂ ಜಾತಿ ಆಧಾರದಲ್ಲಿ ಮೀಸಲಾತಿ ಇರಬೇಕು. ಪ್ರಜಾಪ್ರಭುತ್ವವೇ ಅಂತಿಮ ಪರಿಹಾರ ಅನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಮೈವಿವಿ ಸಿಂಡಿಕೇಟ್ ಸದಸ್ಯ ಶಂಕರ್ ಎಂ. ಹುಯಿಲಾಳು ಮಾತನಾಡಿರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಮಹದೇವಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಪ್ರೊ.ಕೆ. ಅಜಯ್‌ಕುಮಾರ್, ದಾರಿ ಫೌಂಡೇಷನ್ ಅಧ್ಯಕ್ಷ ಎಲ್. ರಂಗಯ್ಯ, ಖಜಾಂಚಿ ವಿಶ್ವನಾಥ್ ಕುಲಕರ್ಣಿ, ಸಂಚಾಲಕ ಪ್ರಭಾಕರ್ ಇದ್ದರು. ಕಾರ್ಯದರ್ಶಿ ತಗಡೂರು ವೀರೇಶ್‌ಕುವಾರ್ ಮಹಾಮನೆ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಸಿ.ಡಿ. ಪರಶುರಾಮ ವಂದಿಸಿದರು. ಸುಮನ್ ತಂಡದವರು ನಾಡಗೀತೆ ಹಾಡಿದರು.
