ಬಾನು ಮುಸ್ತಾಕ್‌ ಅವರಿಗೆ ಮೈಸೂರು ಜಿಲ್ಲಾಡಳಿತ ಆಹ್ವಾನ 

Pratheek
1 Min Read

ಪಬ್ಲಿಕ್ ಅಲರ್ಟ್


ಹಾಸನ: ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಮಹಿತಿ ಬಾನು ಮುಷ್ಕಾಕ್ ಅವರನ್ನು ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಡಳಿತ ವತಿಯಿಂದ ಬುಧವಾರ ಅತ್ಮೀಯವಾಗಿ ಆಹ್ವಾನಿಸಲಾಯಿತು.
ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರ ನೇತೃತ್ವದಲ್ಲಿ ಆಗಮಿಸಿದ್ದ ಅಧಿಕಾರಿಗಳ ತಂಡ ನಗರದ ಅಮೀರ್ ಮೊಹಲ್ಲದಲ್ಲಿರು ಸಾಹಿ ಬಾನು ಮುಷ್ಕಾಕ್ ಅವರ ಮನೆಗೆ ಭೇಟಿ ನೀಡಿ ಮೈಸೂರು ಪೇಟತೊಡಿಸಿ, ಶಾಲು ಹೊದಿಸಿ ದಸರಾ ಆಹ್ವಾನ ಪತ್ರಿಕೆ ನೀಡುವ ಮೂಲಕ ಅಧಿಕೃತವಾಗಿ ಈ ಬಾರಿಯ ದಸರಾ ಉದ್ಘಾವೆಗೆ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಪ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವ ಹಿನ್ನೆಲೆ ಇಂದು ಮೈಸೂರು ಜಿಲ್ಲಾಡಳಿತ ವತಿಯಿಂದ ಬಾನು ಮುಷ್ಕಾಕ್ ಅವರ ಮನೆಗೆ ಭೇಟಿ ನೀಡಿ ದಸರಾ ಉದ್ಘಾಟನೆಗೆ ಆಹ್ವಾನಿಸಲಾಗಿದೆ ಎಂದು ಹೇಳಿದರು.
ಮೈಸೂರು ಜಿಲ್ಲಾಡಳಿತದ ಆಹ್ವಾನ ಸ್ವೀಕರಿಸಿ ಮಾತನಾಡಿದ ಸಾಹಿತಿ ಬಾನು ಮುಸ್ತಾಕ್ ಈ ಬಾರಿಯ ದಸರಾ ಉದ್ಘಾಟನೆಗೆ ನನ್ನ ಆಯ್ಕೆ ಮಾಡಿರುವ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಡಿನ ಸಮಸ್ತ ಜನತೆಗೆ, ಮೈಸೂರು ಜಿಲ್ಲಾಡಳಿತಕ್ಕೆ ಅನಂತ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು. ಮೈಸೂರು ಅಪರ ಜಿಲ್ಲಾಧಿಕಾರಿ ಶಿವರಾಜ್, ಚಾಮುಂಡಿ ಬೆಮಲಯ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ, ಜಿ.ಪಂ. ಸಿಇಒ ಯುಕೇಕ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ತನ್ನಿರ್ ಅಶಿಫ್ ಇತರರು ಇದ್ದರು.

Share This Article
Leave a Comment