ಪಬ್ಲಿಕ್ ಅಲರ್ಟ್
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಶ್ರೀ ಚಾಮುಂಡೇಶ್ವರಿಯ ಭಕ್ತೆಯಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಮುಂಡಿ ಬೆಟ್ಟದ ಮೆಟ್ಟಿಲು ಮೂಲಕ ಆಗಮಿಸಿ ಚಾಮುಂಡೇಶ್ವರಿಗೆ ವಿಶೇಷಪೂಜೆ ಸಲ್ಲಿಸಿದರು.
ತಾವು ಜಿಲ್ಲಾ ಉಸ್ತುವಾರಿ ಸಚಿವರಾದಗಿನಿಂದಲೂ ಪ್ರತಿ ದಸರೆಯಲ್ಲಿ ಬೆಟ್ಟಕ್ಕೆ ಆಗಮಿಸಿ ಚಾಮುಂಡಿಗೆ ವಿಶೇಷಪೂಜೆ ಸಲ್ಲಿಸುವ ಶೋಭಾಕರಂದ್ಲಾಜೆ ಅವರು ಪ್ರತಿ ಬಾರಿ ಮಾವುತ, ಕಾವಾಡಿಗಳ ಕುಟುಂಬಕ್ಕೆ ಉಪಹಾರ ನೀಡುವ ಪದ್ಧತಿಯನ್ನು ರೂಢಿಸಿಕೊಂಡಿದ್ದಾರೆ. ಅದೇ ಮಾದರಿಯಲ್ಲಿ ಈ ಬಾರಿಯೂ ಮಂಗಳವಾರ ವಿಶೇಷಪೂಜೆ ಸಲ್ಲಿಸಿದ್ದು, ನಾಳೆ ಮಾವುತ, ಕಾವಾಡಿ ಕುಟುಂಬಕ್ಕೆ ಉಪಹಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.




