ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆಯ ಭಿತ್ತಿಪತ್ರ ಬಿಡುಗಡೆ

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಾಡಹಬ್ಬ ಮೈಸೂರು ದಸರಾ 2025ರ ಮನೆಮನೆ ಗೊಂಬೆ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಿದು ಸ್ಪರ್ಧೆಯ ಭಿತ್ತಿಪತ್ರವನ್ನು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್‌ ನಗರದ ಬಿಜೆಪಿ ಕಚೇರಿಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಸ್ಪರ್ಧೆಯ ಮಾಹಿತಿ ನೀಡಿದ ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಸ್ಪರ್ಧೆಯಲ್ಲಿ ಭಾಗವಹಿಸುವರರು 200ರೂ. ನೀಡಿ ನೋಂದಣಿಯಾಗಬೇಕು. ದಸರಾ ಗೊಂಬೆ ಸ್ಪರ್ಧೆಯು ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡಂತೆ ಗೊಂಬೆಗಳನ್ನು ಕೂರಿಸಿದ 10 ವಿಜೇತರಿಗೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲೇ ಬಹುಮಾನ ಹಾಗೂ  ಪ್ರಮಾಣಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಅ.2ರ ಒಳಗೆ ಮೊ.8971389539ಗೆ ಗೊಂಬೆ ಜೋಡಣೆ ಮಾಡಿರುವ ಚಿತ್ರ ಹಾಗೂ 3ನಿಮಿಷದ ವೀಡಿಯೊವನ್ನು ಕಳುಹಿಸಿಕೊಡಬೇಕು. ಈ ಸಂದರ್ಭದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಮಹಾಪೌರರಾದ ಶಿವಕುಮಾರ್, ಮುಖಂಡರಾದ ಮಹೇಶ್ ರಾಜ್  ಅರಸ್, ಕಾರ್ತಿಕ್ ಮರಿಯಪ್ಪ, ಪರಿಕ್ಷತ್ ರಾಜ್ ಹಾಗೂ ಇನ್ನಿತರರು ಹಾಜರಿದ್ದರು.

Share This Article
Leave a Comment