ಪಬ್ಲಿಕ್ ಅಲರ್ಟ್
ಮೈಸೂರು: ಶರನ್ನವರಾತ್ರಿಯ 9ನೇ ದಿನ ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧ ಪೂಜೆ ನೆರವೇರಿಸಲು ಸಕಲ ತಯಾರಿ ನಡೆದಿದೆ. ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಂದ ಆಯುಧ ಪೂಜೆ ನೆರವೇರಿಸಿದ ಬಳಿಕ ಪಟ್ಟದ ಆನೆ, ಆನೆ, ಕುದುರೆ , ಹಸು, ವಾಹನಗಳಿಗೆ ಪೂಜೆ ಸಲ್ಲಿಸಲಿದ್ದಾರೆ.
ಆಯುಧ ಪೂಜೆ ಆಚರಣೆಗೆ ಅರಮನೆ ನಗರಿ ಮೈಸೂರು ಸಜ್ಜಾಗಿದೆ. ನಗರದ ದೇವರಾಜ ಮಾರುಕಟ್ಟೆ, ಎಂಜಿ ರಸ್ತೆ ಮಾರುಕಟ್ಟೆಯಲ್ಲಿ ಆಯುಧ ಪೂಜೆಯ ಸಾಮಗ್ರಿಗಳ ಖರೀದಿ ಭರಾಟೆ ಜೋರಾಗಿದೆ. ಮಾರುಕಟ್ಟೆ, ರಸ್ತೆ ಬದಿಗಳಲ್ಲಿ ಪೂಜಾ ಸಾಮಗ್ರಿ, ಬೂದು ಕುಂಬಳಕಾಯಿ, ಹೂವು, ಹಣ್ಣು, ಬಾಳೆಕಂದು, ಮಾವಿನ ಸೊಪ್ಪು ಸೇರಿ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ದೇವರಾಜ ಮಾರ್ಕೆಟ್, ವಾಣಿವಿಲಾಸ ಮಾರ್ಕೆಟ್ ನಲ್ಲೂ ವ್ಯಾಪಾರ ವಹಿವಾಟು ಹೆಚ್ಚಿದೆ.



