*”ಧರ್ಮಸ್ಥಳ, ವೀರೇಂದ್ರ ಹೆಗ್ಗಡೆ ವಿರುದ್ಧದ ಅವಹೇಳನಕಾರಿ ವಿಡಿಯೋ, ಪೋಸ್ಟ್‌ ತಕ್ಷಣ ಡಿಲೀಟ್‌ ಮಾಡಿ – ಕೋರ್ಟ್‌ ಮಹತ್ವದ ಆದೇಶ”*

Pratheek
1 Min Read



ಪಬ್ಲಿಕ್ ಅಲರ್ಟ್

ಬಳ್ಳಾರಿ,ಸೆ.1-ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧದ ಆಧಾರರಹಿತ ಆರೋಪಗಳ ಕುರಿತು ನ್ಯಾಯಾಲಯವು ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಾಲಯವು ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾದ ಆಧಾರರಹಿತ ವಿಡಿಯೋ ಮತ್ತು ಪೋಸ್ಟ್‌ಗಳಿಗೆ ತಡೆಯಾಜ್ಞೆ ನೀಡಿದೆ. ಅಲ್ಲದೆ, ಅವುಗಳನ್ನು ತಕ್ಷಣವೇ ತೆಗೆದುಹಾಕುವಂತೆ ಸೂಚಿಸಿದೆ. ಈ ಮೂಲಕ ನ್ಯಾಯಾಲಯವು ಅವಹೇಳನಕಾರಿಯಾಗಿ ಮಾತನಾಡುವವರಿಗೆ ಎಚ್ಚರಿಕೆ ನೀಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಹಾಗೂ ಅವರ ಕುಟುಂಬಸ್ಥರ ಮೇಲಿನ ಅವಹೇಳನಕಾರಿ ವಿಡಿಯೋ ಬಗ್ಗೆ ಬೆಂಗಳೂರು ನಗರ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರು ಆದೇಶ ಮಾಡಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಆಧಾರ ರಹಿತ ಆರೋಪ, ಮಾನಹಾನಿ ಹೇಳಿಕೆಗಳನ್ನು ನೀಡುತ್ತಿದ್ದವರ ಬಗ್ಗೆ ಕೋರ್ಟ್‌ ಚಾಟಿ ಬೀಸಿದೆ. ಯೂಟ್ಯೂಬ್‌ ಸೇರಿ ಇತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾಗಿದ್ದ ಆಧಾರ ರಹಿತ ವಿಡಿಯೋ ಮತ್ತು ಪೋಸ್ಟ್‌ಗಳಿಗೆ ಕೋರ್ಟ್‌ ತಡೆಯಾಜ್ಞೆ ನೀಡಿದ್ದು, ತಕ್ಷಣವೇ ಅವುಗಳನ್ನು ಡಿಲೀಟ್‌ ಮಾಡುವಂತೆ ಸೂಚಿಸಿದೆ.

TAGGED:
Share This Article
Leave a Comment