ಮಾರ್ಚ್ 28 .ರಂದು ಅರ್ಥಪೂರ್ಣವಾಗಿ ಶ್ರೀ ಅಗ್ನಿಬನ್ನಿರಾಯ ಜಯಂತಿ ಆಚರಣೆ – ಡಾ. ಪಿ ಶಿವರಾಜು

latha prabhukumar
2 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಮಾರ್ಚ್ 28 .ರಂದು ಅರ್ಥಪೂರ್ಣವಾಗಿ ಶ್ರೀ ಅಗ್ನಿಬನ್ನಿರಾಯ ಜಯಂತಿ ಆಚರಣೆ – ಡಾ. ಪಿ ಶಿವರಾಜು

ಮೈಸೂರು, ಮಾ.05(ಕರ್ನಾಟಕ ವಾರ್ತೆ):- ಮಾರ್ಚ್ 28 ರಂದು ಅರ್ಥಪೂರ್ಣವಾಗಿ ಶ್ರೀ ಅಗ್ನಿಬನ್ನಿರಾಯ ಅವರ ಜಯಂತಿಯನ್ನು ನಗರದ ಕಲಾಮಂದಿರದ ಕಿರುರಂಗಮoದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗಳಾದ ಡಾ ಪಿ ಶಿವರಾಜು ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಶ್ರೀ ಅಗ್ನಿಬನ್ನಿರಾಯ ಜಯಂತಿ,ಆಚರಣೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ ಎಂದರು.

ಶ್ರೀ ಅಗ್ನಿಬನ್ನಿರಾಯ ಜಯಂತಿಯನ್ನು ಮಾರ್ಚ್ 28 ರಂದು ಬೆಳಗ್ಗೆ 11:30 ಗಂಟೆಗೆ ಕಿರುರಂಗಮoದಿರದಲ್ಲಿ ಆಚರಣೆ ಮಾಡಲಾಗುವುದು.ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು. ಸಮುದಾಯದ ಮುಖಂಡರ ಸಲಹೆಯಂತೆ ದಿವ್ಯ ಸಾನಿಧ್ಯ ಹಾಗೂ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿ ಯನ್ನು ಆಹ್ವಾನಿಸಲಾಗುವುದು ಎಂದರು.

ಜಯoತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ. ಮಹನೀಯರ ತತ್ವ ಆದರ್ಶಗಳನ್ನು ಗುಣಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ವೇದಿಕೆಯ ಮೇಲೆ ಗಣ್ಯರಿಗೆ ಬೊಕ್ಕೆಗಳನ್ನು ನೀಡಿ ಸ್ವಾಗತ ಮಾಡುವ ಬದಲು ಆಯಾ ಜಯಂತಿಗಳಲ್ಲಿ ಆ ಮಹನೀಯರ ಜೀವನ ಚರಿತ್ರೆ ಕುರಿತ ಪುಸ್ತಕಗಳನ್ನು ನೀಡಿ ಸ್ವಾಗತ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು. ವಿವಿಧ ಜಯಂತಿಗಳ ಆಚರಣೆ ಮಾಡುವಾಗ ಮೈಸೂರು ನಗರದಲ್ಲಿ ಇರುವ ಎಲ್ಲಾ ಮಹನೀಯರ ಪ್ರತಿಮೆಗಳನ್ನು ಮಹಾನಗರ ಪಾಲಿಕೆಯ ವತಿಯಿಂದ ಸ್ವಚ್ಛ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಡಿ ಎಂ ಸುದರ್ಶನ್ ಅವರು ಮಾತನಾಡಿ ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಕಲಾಮಂದಿರದ ಕಿರುರಂಗಮoದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ಸಮುದಾಯದ ಮುಖಂಡರು ಮಾತನಾಡಿ ತಮ್ಮ ತಮ್ಮ ಜಯಂತಿಗಳ ಆಚರಣೆಯ ದಿವ್ಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶ್ರೀ ಅಗ್ನಿಬನ್ನಿರಾಯ ಜಯಂತಿಯ ಆಚರಣೆಯ ಸಂಬoಧ ಮುಖಂಡರುಗಳು ಉಪಸ್ಥಿತರಿದ್ದರು.

Share This Article
Leave a Comment