ಪಬ್ಲಿಕ್ ಅಲರ್ಟ್ ನ್ಯೂಸ್:-ಮುಡುಕುತೊರೆ ಜಾತ್ರೆಯ ಸಾಂಸ್ಕೃತಿಕ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ

latha prabhukumar
1 Min Read

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು, ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಜ.22 ರಿಂದ 31 ರವರೆಗೆ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮದ ಪೋಸ್ಟರ್ ಅನ್ನು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.

ಇತಿಹಾಸ ಪ್ರಸಿದ್ಧ ಮುಡುಕುತೊರೆ ದೇವಸ್ಥಾನಕ್ಕೆ ಪ್ರವಾಸಿಗರು ಹಾಗೂ ಯಾತ್ರಾರ್ಥಿಗಳ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾಗಿದ್ದು, ವಿಜೃಂಭಣೆಯಿಂದ ಜರುಗುವ ಜಾತ್ರೆಗೆ ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಜಾತ್ರೆಯು ಜನವರಿ 21 ರಿಂದ ಪ್ರಾರಂಭವಾಗಿದ್ದು, 28 ರಂದು ಭ್ರಹ್ಮರಥೋತ್ಸವ, 31 ರಂದು ತೆಪ್ಪೋತ್ಸವ ಹಾಗೂ ಫೆಬ್ರವರಿ 4 ರಂದು ಗಿರಿಪ್ರದಕ್ಷಿಣೆ ನಡೆಯಲಿದೆ. ಫೆ.6 ರಂದು ನಡೆಯುವ ಮಹಾಭಿಷೇಕದೊಂದಿಗೆ ಜಾತ್ರೆಯು ಸಂಪನ್ನಗೊಳ್ಳಲಿದೆ.

ಈ ಸಂದರ್ಭದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ ಅವರು, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್ ಅವರು, ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಅವರು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಗೋಪಾಲ್ ಅವರು, ರವಿಕುಮಾರ್ ಅವರು, ಆಪ್ತಸಹಾಯಕರಾದ ಶ್ರೀನಿವಾಸ್ ಅವರು, ತಲಕಾಡು ವೈಧ್ಯನಾಥೇಶ್ವರ ಸಮೂಹ ದೇವಾಲಯ ಸಮಿತಿ ಅಧ್ಯಕ್ಷರಾದ ನಾಗರಾಜು ಅವರು, ಲೋಕೇಶ್, ಮಾದೇಶ್, ಶಾಂತರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share This Article
Leave a Comment