ಶಿಕ್ಷಣದ ಜತೆಗೆ ಕೌಶಲ್ಯವು ಇರಲಿ: ಕಾಂತನಾಯಕ್

Pratheek
1 Min Read

ಪಬ್ಲಿಕ್ ಅಲರ್ಟ್

ಮೈಸೂರು: ಶಿಕ್ಷಣ ಕಲಿಕೆ ಜೊತೆಗೆ ಕೌಶಲ್ಯ ಕೂಡಿದರೆ ಇನ್ನಷ್ಟು ಪ್ರಗತಿ ಸಾಧಿಸಬಹುದು ಎಂದು ಕರ್ನಾಟಕ ಕೌಶಲ್ಯಾಭಿವೃದ್ದಿ ಮಂಡಳಿಯ ಅಧ್ಯಕ್ಷೆ ಕಾಂತಾ ನಾಯಕ್ ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 45 ದಿನಗಳ ಕಾಲ ಆಯೋಜಿಸಿದ್ದ ಕೆ-ಸೆಟ್ ಮತ್ತು ಯುಜಿಸಿ ನೆಟ್ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ವೈಫಲ್ಯಕ್ಕೆ ಹೆದರದೆ ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಬೇಕು. ನಿಮ್ಮ ಆಸಕ್ತಿ ಮತ್ತು ಅಭಿರುಚಿಗೆ ಅನುಗುಣವಾಗಿ ಅಗತ್ಯ ಕೌಶಲ್ಯಗಳನ್ನು ಪಡೆದು ಗುರಿ ಮುಟ್ಟಬೇಕೆಂದು ಸಲಹೆ ನೀಡಿದರು.
ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಲೋಕನಾಥ್ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ತಂತ್ರಜ್ಞಾನ ಜೀವನ ಅವಿಭಾಜ್ಯ ಅಂಗವಾಗಿದೆ. ಇಂದಿನ ಅಧುನಿಕ ಯುಗಕ್ಕೆ ತಂತ್ರಜ್ಞಾನ ಅತ್ಯಗತ್ಯವಾಗಿದೆ. ತಾಂತ್ರಿಕತೆಯ ಜತೆಗೆ ನಾವು ಸಾಗಬೇಕೇ ವಿನಃ ಅದನ್ನು ವಿರೋಧಿಸಬಾರದು ಎಂದರು.
ವಿಶ್ರಾಂತ ಕುಲಪತಿ ಪ್ರೊ.ಲಿಂಗರಾಜ ಗಾಂಧಿ, ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ, ಶೈಕ್ಷಣಿಕ ಡೀನ್ ಪ್ರೊ.ರಾಮನಾಥಂ ನಾಯ್ಡು, ಅಧ್ಯಯನ ಕೇಂದ್ರದ ಡೀನ್ ಡಾ.ಎನ್.ಆರ್.ಚಂದ್ರೇಗೌಡ, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿದ್ದೇಶ್ ಹೊನ್ನೂರ್, ಗಣೇಶ್ ಕೆ.ಜಿ. ಕೊಪ್ಪಲ್ ಮುಂತಾದವರಿದ್ದರು.

Share This Article
Leave a Comment