ಸೆ.26 ರಿಂದ ಮೂರು ದಿನ ರೈತ ದಸರಾ

Pratheek
2 Min Read

ಪಬ್ಲಿಕ್ ಅಲರ್ಟ್


ಮೈಸೂರು: ನಗರದ ಜೆ.ಕೆ.ಮೈದಾನದಲ್ಲಿ ಸೆ 26, 27 ಹಾಗೂ 28 ರಂದು ನಡೆಯುವ ರೈತಾ ದಸರಾ ಮಹೋತ್ಸವವನ್ನು ಅರ್ಥಪೂರ್ಣವಾಗಿ ಯಶಸ್ವಿಗೊಳಿಸಲು ಸಕಲ ಸಿದ್ಧತೆ ಮಾಡಲಾಗಿದೆ.
ನಗರದ ಜಿಲ್ಲಾ ಪಂಚಾಯಿತಿ ದೇವರಾಜ ಅರಸು ಸಭಾಂಗಣದಲ್ಲಿ ನಡೆದ ರೈತದಸರಾ ಉಪಸಮಿತಿ ಪೂರ್ವಭಾವಿ ಸಭೆಯಲ್ಲಿ ರೈತಾ ದಸರಾ ಉಪಸಮಿತಿ ಉಪ ವಿಶೇಷಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ(ಅಭಿವೃದ್ಧಿ)ಯೂ ಆಗಿರುವ ಭೀಮಪ್ಪ ಕ ಲಾಳಿ ಮಾತನಾಡಿ,  ಸೆ.26ರ ಬೆಳಿಗ್ಗೆ 9.30ಕ್ಕೆ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಎದುರು ರೈತ ದಸರೆಯ ಅದ್ಧೂರಿ ಮೆರವಣಿಗೆಗೆ ಕೃಷಿ ಸಚಿವ ಎನ್‌.ಚೆಲುವರಾಯಸ್ವಾಮಿ ಚಾಲನೆ ನೀಡುವರು. ಮುಖ್ಯ ಅತಿಥಿಯಾಗಿ‌ ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಭಾಗವಹಿಸುವರು. ಶಾಸಕ ಟಿ.ಎಸ್ ಶ್ರೀವತ್ಸ ಅಧ್ಯಕ್ಷತೆವಹಿಸುವರು.
ಬೆಳಿಗ್ಗೆ 11ಕ್ಕೆ ಜೆ.ಕೆ. ಮೈದಾನದಲ್ಲಿ ಕೃಷಿ ವಸ್ತು ಪ್ರದರ್ಶನ ವನ್ನು ಪಶುಸಂಗೋಪನೆ ಮತ್ತು ರೇಷ್ಮ ಖಾತೆ ಸಚಿವರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಉದ್ಘಾಟಿಸುವರು. ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಕೃಷಿ ಸಚಿವ ಚೆಲುವರಾಯಸ್ವಾಮಿ ಅತಿಥಿಗಳಾಗಿ ಭಾಗವಹಿಸಲಿದ್ದು, ಶಾಸಕ ಕೆ.ಹರೀಶಗೌಡ ಅಧ್ಯಕ್ಷತೆವಹಿಸುವರು.
ಬೆಳಗ್ಗೆ 11.15ಕ್ಕೆ ಜೆಕೆ ಗ್ರೌಂಡ್  ವೈದ್ಯಕೀಯ ಮಹಾವಿದ್ಯಾಲಯದ ಅಮೃತ ಮಹೋತ್ಸವ ಸಭಾ ಭವನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಲಿದ್ದು, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹಾಗೂ ಮೀನುಗಾರಿಕೆ ಹಾಗೂ ಬಂದರು ಸಚಿವ ಮಂಕಾಳ ಎಸ್ ವೈದ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಶಾಸಕ ಕೆ.ಹರೀಶ್ ಗೌಡ ಅಧ್ಯಕ್ಷತೆ ವಹಿಸುವರು.
ಸೆ.27 ರಂದು ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆ ಸಹ ನಡೆಯಲಿದ್ದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟನೆ  ಮಾಡುವರು. ಸಚಿವ ಕೆ.ವೆಂಕಟೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಶಾಸಕ ಕೆ. ಹರೀಶ್ ಗೌಡ ಅಧ್ಯಕ್ಷತೆ ವಹಿಸುವರು. ಅಂದು ಬೆಳಗ್ಗೆ 6.30 ಗಂಟೆಗೆ ಹಾಲು ಕರೆಯುವ ಸ್ಪರ್ಧೆ ನಡೆಯಲಿದ್ದು ಹಾಗೂ ಸಂಜೆ 5.30 ಕ್ಕೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದರು.
ಸೆ.28 ರಂದು ಜೆಕೆ ಗ್ರೌಂಡ್ ಅಲ್ಲಿ ಶ್ವಾನ ಮುದ್ದು ಪ್ರಾಣಿಗಳ ಪ್ರದರ್ಶನ ಹಾಗೂ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದ್ದು, ಗಣ್ಯರು ಭಾಗವಹಿಸುವರು. 
ಸಭೆಯಲ್ಲಿ ರೈತ ದಸರಾ ಉಪ ಸಮಿತಿ ಕಾರ್ಯಾಧ್ಯಕ್ಷರೂ ಆಗಿರುವ ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಹೆಚ್ ರವಿ, ರೈತದಸರಾ ಉಪಸಮಿತಿ ಸಹ ಕಾರ್ಯಾದಕ್ಷ  ಆಗಿರುವ ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಎಚ್.ಮಂಜುನಾಥ್, ರೈತ ದಸರಾ ಉಪ ಸಮಿತಿ ಕಾರ್ಯದರ್ಶಿ ಆಗಿರುವ ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ.ನಾಗರಾಜು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Share This Article
Leave a Comment