ನ.3ಕ್ಕೆ ಚಲನಚಿತ್ರೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ: ಜಿ.ಲಕ್ಷ್ಮೀಕಾಂತ ರೆಡ್ಡಿ

Pratheek
1 Min Read

ಪಬ್ಲಿಕ್ ಅಲರ್ಟ್

ಮೈಸೂರು: ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನ.3 ರಂದು ಸಂ.5 ಗಂಟೆಗೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ 2018 ಹಾಗೂ 2019 ನೇ ಸಾಲಿನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಮ್ಮೀಕಾಂತ ರೆಡ್ಡಿ ತಿಳಿಸಿದರು.
ಮಹಾನಗರ ಪಾಲಿಕೆ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ‌ ಮಾತನಾಡಿದರು. ನವೆಂಬರ್ 3 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಉತ್ತಮ ನಟ, ನಟಿ, ನಿರ್ದೇಶಕರು ಹಾಗೂ ಇನ್ನಿತರ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಿದ್ದಾರೆ ಎಂದರು.

ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ವೇದಿಕೆಯನ್ನು ಉತ್ತಮ ರೀತಿಯಲ್ಲಿ ಸಜ್ಜುಗೊಳಿಸಬೇಕು. ಯಾವುದೇ ಲೋಪ ಉಂಟಾಗದಂತೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಮೈಸೂರು ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಮೈಸೂರು ನಗರ ಡಿ.ಸಿ.ಪಿ ಆರ್.ಎನ್ ಬಿಂದುಮಣಿ, ಸಹಾಯಕ‌ ಪೊಲೀಸ್  ಆಯುಕ್ತ  ಶಿವಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ವಿನೋದ್ ಚಂದ್ರ ಸೇರಿ ಇನ್ನಿತರರು ಉಪಸ್ಥಿತರಿದ್ದರು.

Share This Article
Leave a Comment