ಪಬ್ಲಿಕ್ ಅಲರ್ಟ್
ಮೈಸೂರು: ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ನಡೆಸಿ ಹಾಡಿ ಜನಗಳಿಗೆ ಜಾಗೃತಿ ಮೂಡಿಸಿ. ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಎಸ್.ಅರುಣ್ ಕುಮಾರ್ ಹೇಳಿದರು.
ಜಿಲ್ಲಾ ಪಂಚಾಯತ್ ನ ಡಿ. ದೇವರಾಜ ಅರಸು ಸಭಾಂಗಣದಲ್ಲಿ ಹಮಿಕೊಳ್ಳಲಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಹಾಡಿ ಪ್ರದೇಶಗಳು ಇರುವಂತಹ ಪ್ರದೇಶಗಳಲ್ಲಿ ಅಧಿಕಾರಿಗಳು ಶಿಬಿರ ಆಯೋಜಿಸಿ ಅವರಿಗೆ ಗ್ಯಾರಂಟಿ ಯೋಜನೆಯ ಬಗ್ಗೆ ತಿಳಿಸಬೇಕು. ಅವರಿಗೆ ಎಲ್ಲಾ ಯೋಜನೆಗಳು ಲಭ್ಯವಾಗುತ್ತಾ ಇದಿಯಾ ಎಂದು ಪರಿಶೀಲನೆ ಮಾಡಬೇಕು. ಒಂದು ವೇಳೆ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ತಿರಸ್ಕೃತಗೊಂಡಿದ್ದರೆ ಅರ್ಜಿಗಳನ್ನೂ ಪರಿಶೀಲನೆ ಮಾಡಿ ಅವರಿಗೆ ಎಲ್ಲಾ ಯೋಜನೆಗಳು ತಲುಪುವಂತೆ ಮಾಡಬೇಕು ಎಂದರು.
ಬಡವರ ಪಾಲಿನ ಯೋಜನೆಗಳಲ್ಲಿ ಒಂದಾದ ಉಚಿತ ಅನ್ನಭಾಗ್ಯ ವಿತರಣೆ ಯೋಜನೆಯಲ್ಲಿ ಹಲವು ದೂರುಗಳು ಕೇಳಿ ಬಂದಿದ್ದು ಕೆಲವು ಭಾಗಗಳಲ್ಲಿ ಕಳಪೆ ಗುಣಮಟ್ಟದ ಅಕ್ಕಿ, ರಾಗಿ ಸರಬರಾಜು ಪೂರೈಕೆಯಾಗುತ್ತಿದೆ ಎಂಬ ದೂರುಗಳು ಬಂದಿರುತ್ತದೆ, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ದಾಸ್ತಾನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.
ಗೃಹಲಕ್ಷ್ಮಿ ಯೋಜನೆ ಇನ್ನೂ ಅನೇಕ ಮಹಿಳೆಯರಿಗೆ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ಅದರ ಬಗ್ಗೆಯೂ ಸಹ ಗಮನ ವಹಿಸಬೇಕು. ಸರಿಯಾಗಿ ಹಣ ಪಾವತಿಯಾಗುತ್ತಿದೆಯ ಎಂಬುದರ ಪರಿಶೀಲನೆ ನಡೆಸಬೇಕು. ಅಲ್ಲದೆ ಯುವ ನಿಧಿ ಯೋಜನೆಯಲ್ಲಿ ಯಾವುದೇ ತೊಂದರೆ ಕಂಡುಬಂದಿಲ್ಲ ಆದರೂ ಸಹ ಹಾಡಿ ಜನಗಳಿಗೆ ಯುವನಿಧಿ ಸರಿಯಾಗಿ ತಲುಪುತ್ತಾ ಇದಿಯಾ ಎಂದು ಪರಿಶೀಲನೆ ನಡೆಸಿ ಯುವನಿಧಿ ಯೋಜನೆ ಎಲ್ಲಾ ಯುವಕ ಯುವತಿಯರಿಗೆ ಸಿಗುವಂತೆ ಮಾಡಬೇಕು. ಎಲ್ಲಾ ಯೋಜನೆಗಳ ಬಗ್ಗೆ ಎಲ್ಲಾ ಕಡೆಗಳಲ್ಲೂ ಅಧಿಕಾರಿಗಳು ಕೂಲಂಕುಶವಾಗಿ ಪರಿಶೀಲಿಸಿ ಎಲ್ಲರಿಗೂ ಯೋಜನೆಗಳು ಸಿಗುವಾಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಶಕ್ತಿ ಯೋಜನೆಯಲ್ಲಿ ಅನೇಕ ಕಡೆಗಳಿಂದ ದೂರುಗಳು ಬಂದಿದ್ದು, ಆದಷ್ಟು ಬೇಗ ದೂರುಗಳನ್ನು ಪರಿಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಗೃಹಜ್ಯೋತಿ ಯೋಜನೆಯ ಯಾವುದೇ ದೂರು ಇಲ್ಲದೆ ಅಚ್ಚುಕಟ್ಟಾಗಿ ನಡೆದುಕೊಂಡು ಬರುತ್ತಿದೆ ಈ ಯೋಜನೆಯನ್ನು ಈಗೆಯೇ ಮುಂದುವರೆಸಿಕೊಂಡು ಹೋಗಿ ಎಂದು ಹೇಳಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್ , ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪ್ರೊ. ಶಿವಕುಮಾರ್, ಹುಣಸೂರು ಬಸವಣ್ಣ, ಸಾ.ಮ.ಯೋಗೇಶ್, ಗ್ಯಾರಂಟಿ ಯೋಜನೆಯ ಸದಸ್ಯರಾದ ಲತಾ , ಕೆ.ಮಾರುತಿ, ಬಿ.ಮಹದೇವಪ್ರಭು ಸೇರಿ ಇತರರು ಉಪಸ್ಥಿತರಿದ್ದರು.
ಹಾಡಿಗಳಲ್ಲೂ ಗ್ಯಾರಂಟಿ ಯೋಜನೆ ಅರಿವು ಮೂಡಿಸಿ- ಅರುಣ್ ಕುಮಾರ್
Leave a Comment
Leave a Comment
