ದ.ಕ- ಉಡುಪಿ ಜಿಲ್ಲೆಗಳಲ್ಲಿ ಬಾರಿ ಮಳೆ, ಶಾಲೆಗಳಿಗೆ ರಜೆ ಘೋಷಣೆ

Pratheek
1 Min Read


ಪಬ್ಲಿಕ್‌ ಅಲರ್ಟ್‌


ಮಂಗಳೂರು/ಉಡುಪಿ: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಮಂಗಳೂರು, ಪುತ್ತೂರು, ಮೂಲ್ಕಿ, ಮೂಡಬಿದಿರೆ, ಉಳ್ಳಾಲ ಹಾಗೂ ಬಂಟ್ವಾಳ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಅಗಸ್ಟ್ 28 ರಂದು  ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆ ಬಾರಿ ಮಳೆ ಸುರಿಯವ ಮುನ್ಸೂಚನೆ ನೀಡಿದ್ದು, ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗ್ರತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಮಾತನಾಡಿ, ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯು ಹಾಗೂ ಐಟಿಐ ಕಾಲೇಜುಗಳಿಗೆ ಆ.28ರಂದು ರಜೆ ಘೋಷಣೆ ಮಾಡಿ ಅವರು ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಹಿತರಕ್ಷಣೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

TAGGED:
Share This Article
Leave a Comment