ಮೂವರಿಗೆ ಹೋಟೆಲ್ ಉದ್ಯಮಿಗಳಿಗೆ ಸಹಕಾರ ಮಿತ್ರ ಪ್ರಶಸ್ತಿ

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು: ನಗರದ ಕೃಷ್ಣಮೂರ್ತಿಪುರಂನ ಹೋಟೆಲ್ ಮಾಲೀಕರ ಪತ್ತಿನ  ಸಹಕಾರ ಸಂಘದ 30ನೇ ವಾರ್ಷಿಕೋತ್ಸವ ಹಾಗೂ ಹಿರಿಯ ಹೋಟೆಲ್ ಉದ್ಯಮಿಗಳಿಗೆ ಸಹಕಾರ ಮಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸೆ.16 ರಂದು ಬೆಳಗ್ಗೆ 11.30ಕ್ಕೆ ಬಿ.ಎನ್.ರಸ್ತೆಯ ಪೈ ವಿಸ್ತಾ ಹೋಟೆಲ್ ನಲ್ಲಿ ನಡೆಯಲಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬೆಂಗಳೂರಿನ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಡಾ.ಶ್ರೀ ನಿಶ್ಚಲಾನಂದ ನಾಥ ಮಹಾಸ್ವಾಮೀಜಿ ಅವರು ವಹಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್, ಮಹಾನಗರ ಪಾಲಿಕೆ ಆಯುಕ್ತರಾದ ಶೇಖ್ ತನ್ವೀರ್ ಆಸಿಫ್ ಅವರು ಪಾಲ್ಗೊಳ್ಳುವರು. ಇದೇ ಸಂದರ್ಭದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಹಿರಿಯ ಹೋಟೆಲ್ ಉದ್ಯಮಿಗಳಾದ ಬಿ.ವಿಜಯಲಕ್ಷ್ಮಿ ಹಯವದನ ಆಚಾರ್, ಬಿ.ಬಾಲಕೃಷ್ಣಭಟ್ ಹಾಗೂ ಡಿ.ಚಂದ್ರಶೇಖರ್ ಶೆಟ್ಟಿ  ಅವರಿಗೆ ಸಹಕಾರ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸಂಘದ ಸದಸ್ಯರು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಸಂಘದ ಅಧ್ಯಕ್ಷ ನಾರಾಯಣ ವಿ.ಹೆಗಡೆ ಹಾಗೂ ಉಪಾಧ್ಯಕ್ಷ ಆನಂದ ಎಂ.ಶೆಟ್ಟಿ ಕೋರಿದ್ದಾರೆ.

Share This Article
Leave a Comment