ಸುಚಿರಾಯು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿಗಳು

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಸುಚಿರಾಯು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿಗಳು

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಜ.24: ಇಂದು ಮಂಟೂರು ರಸ್ತೆಯಲ್ಲಿ ಕಟೌಟ್ ಅಳವಡಿಸುತ್ತಿದ್ದಾಗ, ಆಕಸ್ಮಿಕವಾಗಿ ಕಟೌಟ್ ಬಿದ್ದು ಮೂವರು ಜನ ಗಾಯಗಳಾಗಿ ನಗರದ ಸುಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಸತಿರಹಿತರಿಗೆ ನೂತನ ಮನೆಗಳ ವಿತರಣೆ ಕಾರ್ಯಕ್ರಮದ ನಂತರ, ಹುಬ್ಬಳ್ಳಿ ಸುಚಿರಾಯು ಆಸ್ಪತ್ರೆಗೆ ಭೇಟಿ ನೀಡಿದರು.

ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಾದ ಬ್ಯಾಹಟ್ಟಿಯ ಶಂಕರ ಹಡಪದ (28), ಹುಬ್ಬಳ್ಳಿಯ ಶಾಂತಾ ಕ್ಯಾರಕಟ್ಟಿ ( 60) ಮತ್ತು ಧಾರವಾಡದ ಲಕ್ಷ್ಮಿ ನಗರದ ಮಂಜುನಾಥ (33) ಅವರನ್ನು
ಮುಖ್ಯಮಂತ್ರಿಗಳು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿದ ಸವರು, ಗಾಯಾಳುಗಳು ಸಂಪೂರ್ಣ ಗುಣಮುಖರಾಗುವವರೆಗೆ ಉಚಿತವಾಗಿ ಅಗತ್ಯವಾದ ಉತ್ತಮ ಚಿಕಿತ್ಸೆ, ಔಷಧಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ.ಮಹಾದೇವಪ್ಪ, ವಸತಿ ಸಚಿವರಾದ ಜಮೀರ ಅಹ್ಮದ ಖಾನ್, ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇಕರಾದ ಸಲೀಂ ಅಹ್ಮದ,
ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ, ಪ್ರಭಾರ ಜಿಲ್ಲಾದಿಕಾರಿ ಭುವನೇಶ ಪಾಟೀಲ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ
ಹೊನಕೇರಿ ಹಾಗೂ ಸುಚಿರಾಯು ಆಸ್ಪತ್ರೆಯ ತಜ್ಞ ವೈದ್ಯರು, ಸಿಬ್ಬಂದಿಗಳು, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment