ಸಾರ್ವಜನಿಕ ಗ್ರಂಥಾಲಯ -2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ – ಆಕ್ಷೇಪಣೆ ಸಲ್ಲಿಸಲು ಅವಕಾಶ

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್ ಸಾರ್ವಜನಿಕ ಗ್ರಂಥಾಲಯ
2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ – ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಮಾರ್ಚ್ 03, (ಕರ್ನಾಟಕ ವಾರ್ತೆ):

2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪಟ್ಟಿಯನ್ನು ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಹಾಗೂ ಇಲಾಖೆಯ ಅಧಿಕೃತ ವೆಬ್‍ಸೈಟ್ www.dpl.karnataka.gov.in ನಲ್ಲಿ 2026 ನೇ ಮಾರ್ಚ್ 02 ರಂದು ಪ್ರಕಟಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು ಅವಕಾಶ :

ಆಯ್ಕೆಯಾದ ಪುಸ್ತಕಗಳ ಪಟ್ಟಿಯಲ್ಲಿರುವ ಲೇಖಕರು, ಲೇಖಕ – ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ತಮ್ಮ ಪುಸ್ತಕಗಳಿಗೆ ಸಂಬಂಧಿಸಿದ ಪುಸ್ತಕದ ಶೀರ್ಷಿಕೆ, ಲೇಖಕರ / ಪ್ರಕಾಶಕರ ಹೆಸರು, ಮುಖ ಬೆಲೆ (ನಿಗದಿತ ಬೆಲೆಯಲ್ಲಿ ವ್ಯತ್ಯಾಸವಿದ್ದಲ್ಲಿ), ಪುಸ್ತಕದ ಅಳತೆ ಮತ್ತು ಪುಟಗಳ ಸಂಖ್ಯೆ ಅಥವಾ ಇತರ ಯಾವುದೇ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ ತಮ್ಮ ಆಕ್ಷೇಪಣೆ ಅಥವಾ ತಿದ್ದುಪಡಿಗಳನ್ನು ಅಧಿಕೃತ ಮಾಹಿತಿ / ದಾಖಲೆಗಳೊಂದಿಗೆ 2026 ನೇ ಮಾರ್ಚ್ 16ರ ಸಂಜೆ 5.30ರ ಒಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು – 560001 ಇಲ್ಲಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು.

ನಿಗದಿತ ಅವಧಿಯ ನಂತರ ಬರುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಮತ್ತು ಏಕಪಕ್ಷೀಯವಾಗಿ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರಾದ ಬಸವರಾಜೇಂದ್ರ ಹೆಚ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment