ಜಿಲ್ಲಾಧಿಕಾರಿಗಳ ಆದೇಶದಂತೆ ಒತ್ತುವರಿ ತೆರವುಗೊಳಿಸಿದ ಮೈಸೂರು ತಹಶೀಲ್ದಾರ್

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಜಿಲ್ಲಾಧಿಕಾರಿಗಳ ಆದೇಶದಂತೆ ಒತ್ತುವರಿ ತೆರವುಗೊಳಿಸಿದ ಮೈಸೂರು ತಹಶೀಲ್ದಾರ್

ಮೈಸೂರು,ಫೆ.6 (ಕರ್ನಾಟಕ ವಾರ್ತೆ):-
ಮೈಸೂರು ತಾಲ್ಲೂಕು ಕಸಬಾ ಹೋಬಳಿ, ಮೈಸೂರು ಗ್ರಾಮದ ಸ.ನಂ.87ರಲ್ಲಿ 0.38 ಎಕರೆ/ಗುಂಟೆ ಜಮೀನನ್ನು ಮಾನ್ಯ ಜಿಲ್ಲಾಧಿಕಾರಿಗಳ ಅಧಿಕೃತ ಜ್ಞಾಪನ ಸಂಖ್ಯೆ: LND(1)CR: 280/2009-10, ದಿನಾಂಕ: 30.08.2010 ರ ಆದೇಶದಂತೆ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಮೈಸೂರು ರವರಿಗೆ ಮೆಟ್ರಿಕ್‌ ನಂತರದ ಬಾಲಕಿಯರ/ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡದ ಉದ್ದೇಶಕ್ಕಾಗಿ ಕಾಯ್ದಿರಿಸಿ ಆದೇಶಿಸಲಾಗಿತ್ತು.

ಸದರಿ ಪ್ರದೇಶದಲ್ಲಿ ಅನಧಿಕೃತವಾಗಿ ಸ್ಕೂಟರ್‌ ಪಾರ್ಕಿಂಗ್‌ ಮಾಡುತ್ತಿದ್ದುದರಿಂದ ಸದರಿ ಒತ್ತುವರಿಯನ್ನು ತೆರವು ಮಾಡಿಕೊಡುವಂತೆ ಹಿಂದುವಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ರವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು, ಅವರ ಕೋರಿಕೆಯಂತೆ ಹಾಗೂ ಮೇಲಾಧಿಕಾರಿಗಳ ನಿರ್ದೇಶನದಂತೆ ದಿನಾಂಕ: 06.02.2026 ರಂದು ಮೈಸೂರು ತಹಶೀಲ್ದಾರ್ ಮಹೇಶ್ ಹಾಗೂ ಅಧಿಕಾರಿಗಳ ತಂಡ ಸದರಿ ಪ್ರದೇಶದ ಒತ್ತುವರಿಯನ್ನು ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದಿರುತ್ತಾರೆ.

ಒತ್ತುವರಿ ತೆರವು ಸಂದರ್ಭದಲ್ಲಿ ನಗರ ಮಾಪನ ಇಲಾಖೆಯ ಸಹಾಯಕ ನಿರ್ದೇಶಕ
ಚಿಕ್ಕಣ್ಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರಾಘವೇಂದ್ರ, ಅರಕ್ಷಕ ನಿರೀಕ್ಷಕ ಯೋಗಾಂಜನಪ್ಪ, ರವಿಶಂಕರ್, ರೋಹಿತ ಅವರುಗಳು ಹಾಜರಿದ್ದರು.

Share This Article
Leave a Comment