ಕಡಿಮೆ ದರದಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಹಾಗೂ ಊಟದ ವ್ಯವಸ್ಥೆ: ಸಾರ್ವಜನಿಕ ಕಾಳಿದಾಸ ವಿದ್ಯಾರ್ಥಿ ನಿಲಯ ಟ್ರಸ್ಟ್‌ನಿಂದ ನೆರವು

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಕಡಿಮೆ ದರದಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಹಾಗೂ ಊಟದ ವ್ಯವಸ್ಥೆ: ಸಾರ್ವಜನಿಕ ಕಾಳಿದಾಸ ವಿದ್ಯಾರ್ಥಿ ನಿಲಯ ಟ್ರಸ್ಟ್‌ನಿಂದ ನೆರವು

ಮೈಸೂರು, ಮೇ 12: ಶಿಕ್ಷಣಕ್ಕಾಗಿ ನಗರಕ್ಕೆ ಆಗಮಿಸುವ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ನಗರದ ಮಾನಂದವಾಡಿ ರಸ್ತೆಯಲ್ಲಿರುವ ಸಾರ್ವಜನಿಕ ಕಾಳಿದಾಸ ವಿದ್ಯಾರ್ಥಿ ನಿಲಯ ಟ್ರಸ್ಟ್ ವತಿಯಿಂದ ಕಡಿಮೆ ದರದಲ್ಲಿ ಹಾಸ್ಟೆಲ್ ಹಾಗೂ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹುಡುಗರು ಹಾಗೂ ಹುಡುಗಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಮಾಡಲಾಗಿದ್ದು, ಸುರಕ್ಷಿತ ಮತ್ತು ಶಿಸ್ತುಬದ್ಧ ವಾತಾವರಣದಲ್ಲಿ ವಸತಿ ಸೌಲಭ್ಯ ಒದಗಿಸಲಾಗಿದೆ. ಜೊತೆಗೆ ಶುಚಿಯಾದ ಕೊಠಡಿಗಳು, ಪೌಷ್ಟಿಕ ಆಹಾರ ಹಾಗೂ ಓದಿಗೆ ಅನುಕೂಲಕರ ವಾತಾವರಣ ಕಲ್ಪಿಸಲಾಗಿದೆ.

ಗ್ರಾಮೀಣ ಹಾಗೂ ದೂರದ ಪ್ರದೇಶಗಳಿಂದ ಉನ್ನತ ಶಿಕ್ಷಣಕ್ಕಾಗಿ ಮೈಸೂರಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಸೌಲಭ್ಯ ಒದಗಿಸುವ ಮೂಲಕ ಟ್ರಸ್ಟ್ ಸಮಾಜಮುಖಿ ಕಾರ್ಯ ನಿರ್ವಹಿಸುತ್ತಿದೆ. ಎಸ್‌ಎಸ್‌ಎಲ್‌ಸಿ ನಂತರ ಪಿಯುಸಿ, ಪದವಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ನಗರಕ್ಕೆ ಬರುವ ವಿದ್ಯಾರ್ಥಿಗಳು ಈ ಸೌಲಭ್ಯದ ಪ್ರಯೋಜನ ಪಡೆಯಬಹುದಾಗಿದೆ.
.

ಆಸಕ್ತ ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಮಾಹಿತಿಗಾಗಿ ಟ್ರಸ್ಟ್ ಕಚೇರಿಯನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9480849427, 9740863559 ಹಾಗೂ 9164268026 ಅನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

Share This Article
Leave a Comment