ಚಾಮುಂಡಿ ಬೆಟ್ಟದಲ್ಲಿ ಶ್ರೀಧರ ನಾಯಕ 47ನೇ ಜನ್ಮದಿನ ಸಂಭ್ರಮ

latha prabhukumar
2 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಚಾಮುಂಡಿ ಬೆಟ್ಟದಲ್ಲಿ ಶ್ರೀಧರ ನಾಯಕ 47ನೇ ಜನ್ಮದಿನ ಸಂಭ್ರಮ

ಮೈಸೂರು: ಜಯ ಕರ್ನಾಟಕ ಸಂಘಟನೆಯ ನಿಕಟ ಪೂರ್ವ ಜಿಲ್ಲಾಧ್ಯಕ್ಷರು ಹಾಗೂ ಹಲವು ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶ್ರೀಧರ ನಾಯಕ ಅವರ 47ನೇ ವರ್ಷದ ಜನ್ಮದಿನವನ್ನು ನಗರದ ಚಾಮುಂಡಿ ಬೆಟ್ಟದಲ್ಲಿ ಅಭಿಮಾನಿಗಳು, ಸ್ನೇಹಿತರು ಹಾಗೂ ಕಾರ್ಯಕರ್ತರು ಭಾನುವಾರ ಅದ್ದೂರಿಯಾಗಿ ಆಚರಿಸಿದರು.

ಅಧ್ಯಕ್ಷರು, ಚಾಮುಂಡಿ ಬೆಟ್ಟ ಗ್ರಾಮ ನಿವಾಸಿಗಳ ಹಿತರಕ್ಷಣಾ ಸಮಿತಿ (ರಿ), ರಾಜ್ಯಾಧ್ಯಕ್ಷರು ಕರ್ನಾಟಕ ರಾಜ್ಯ ನಾಯಕ ಜನಾಂಗ ಹಿತರಕ್ಷಣಾ ಮಹಾಸಂಘ, ರಾಜ್ಯ ಕಾರ್ಯಾಧ್ಯಕ್ಷರು ಕರ್ನಾಟಕ ರಾಜ್ಯ ರೈತ ಸಂಘ ರೈತ ಪರ (ರಿ) ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಧರ ನಾಯಕ ಅವರಿಗೆ ಜನ್ಮದಿನದ ಅಂಗವಾಗಿ ಅಭಿಮಾನಿಗಳು ಭವ್ಯ ಸ್ವಾಗತ ಕೋರಿದರು. ಕಾರ್ಯಕ್ರಮದ ಸ್ಥಳದಲ್ಲಿ ವಿಶೇಷ ಅಲಂಕಾರ, ಬೃಹತ್ ಫ್ಲೆಕ್ಸ್ ಹಾಗೂ ಹೂವಿನ ಸಿಂಗಾರ ಗಮನ ಸೆಳೆಯಿತು.

ಕಾರ್ಯಕ್ರಮದ ಆರಂಭದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಶ್ರೀಧರ ನಾಯಕ ಅವರ ಆರೋಗ್ಯ, ಆಯುಷ್ಯ ಹಾಗೂ ಇನ್ನಷ್ಟು ಸಮಾಜಮುಖಿ ಸೇವೆ ಮಾಡಲು ಶಕ್ತಿ ದೊರಕಲಿ ಎಂದು ಪ್ರಾರ್ಥಿಸಲಾಯಿತು. ಬಳಿಕ ಅಭಿಮಾನಿಗಳು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹಾಗೂ ಸಿಹಿ ಹಂಚುವ ಮೂಲಕ ಜನ್ಮದಿನದ ಸಂಭ್ರಮವನ್ನು ಹಂಚಿಕೊಂಡರು. “ಶ್ರೀಧರ ನಾಯಕರಿಗೆ ಜಯವಾಗಲಿ” ಎಂಬ ಘೋಷಣೆಗಳು ಮೊಳಗಿದವು.

ಇದೇ ಸಂದರ್ಭದಲ್ಲಿ ಮಾತನಾಡಿದ ಶ್ರೀಧರ ನಾಯಕ ಅವರು, ತಮ್ಮ ಜನ್ಮದಿನದ ಪ್ರಯುಕ್ತ ಅನೇಕ ಸಾಮಾಜಿಕ ಕಾರ್ಯಗಳನ್ನು ಕೈಗೊಂಡಿರುವುದಾಗಿ ತಿಳಿಸಿದರು. ಚಾಮುಂಡಿ ಬೆಟ್ಟದ ಹಿತರಕ್ಷಣೆ, ರೈತರ ಸಮಸ್ಯೆಗಳು ಹಾಗೂ ಬಡವರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದು, ಮುಂದೆಯೂ ದೇವರ ಆಶೀರ್ವಾದದಿಂದ ಇನ್ನಷ್ಟು ಜನಸೇವೆ ಮಾಡುವ ಸಂಕಲ್ಪ ಹೊಂದಿದ್ದೇನೆ ಎಂದು ಹೇಳಿದರು. ಸಮಾಜದ ಎಲ್ಲ ವರ್ಗದ ಜನರ ಸಹಕಾರದಿಂದ ಸೇವಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಭಿಮಾನಿಗಳು ಹಾಗೂ ಸಂಘಟನೆಯ ಪದಾಧಿಕಾರಿಗಳು, ಶ್ರೀಧರ ನಾಯಕ ಅವರು ಕನ್ನಡಪರ ಹೋರಾಟಗಳು, ರೈತಪರ ಚಟುವಟಿಕೆಗಳು ಹಾಗೂ ಸಮಾಜಮುಖಿ ಸೇವೆಗಳ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ಪ್ರಶಂಸಿಸಿದರು. ವಿಶೇಷವಾಗಿ ಚಾಮುಂಡಿ ಬೆಟ್ಟದ ಪರಿಸರ ಸಂರಕ್ಷಣೆ, ಗ್ರಾಮಸ್ಥರ ಹಿತಾಸಕ್ತಿ ಹಾಗೂ ರೈತರ ಪರ ಹೋರಾಟಗಳಲ್ಲಿ ಅವರು ಸದಾ ಮುಂಚೂಣಿಯಲ್ಲಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜನ್ಮದಿನದ ಅಂಗವಾಗಿ ಅನ್ನಸಂತರ್ಪಣೆ ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮವೂ ನಡೆಯಿತು. ವಿವಿಧ ಭಾಗಗಳಿಂದ ಆಗಮಿಸಿದ್ದ ಅಭಿಮಾನಿಗಳು, ಸ್ನೇಹಿತರು, ರೈತ ಸಂಘದ ಮುಖಂಡರು, ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಶ್ರೀಧರ ನಾಯಕ ಅವರಿಗೆ ಶುಭಾಶಯ ಕೋರಿದರು. ಚಾಮುಂಡಿ ಬೆಟ್ಟದ ಪ್ರದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಂಭ್ರಮ ಮನೆಮಾಡಿತ್ತು.

Share This Article
Leave a Comment