ಜಿಲ್ಲೆಯಲ್ಲಿ ಜೂನ್ 28 ರಿಂದ ಜುಲೈ 1ರವರೆಗೆ ಪಲ್ಸ್ ಪೋಲಿಯೋ ಅಭಿಯಾನ

latha prabhukumar
3 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಜಿಲ್ಲೆಯಲ್ಲಿ ಜೂನ್ 28 ರಿಂದ ಜುಲೈ 1ರವರೆಗೆ ಪಲ್ಸ್ ಪೋಲಿಯೋ ಅಭಿಯಾನ
5 ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ ಡಾ ಕುಮಾರಸ್ವಾಮಿ

ಮೈಸೂರು, ಮೇ.25(ಕರ್ನಾಟಕ ವಾರ್ತೆ):-
ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಜೂನ್ 28 ರಿಂದ ಜುಲೈ 1 ರವರೆಗೆ ನಡೆಯಲಿದ್ದು, ೦-5 ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕುಮಾರಸ್ವಾಮಿ ಪಿ.ಸಿ ಅವರು ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು

ಜೂನ್ 28 ರಂದು 1641 ಬೂತ್ ಗಳನ್ನು ತೆರೆದು ಮಕ್ಕಳಿಗೆ ಲಸಿಕೆ ಹಾಕಲಾಗುವುದು. . ಜೂನ್ 28:ರಂದು ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ತಪ್ಪದೇ ಲಸಿಕೆ ಹಾಕಿಸಿ. ಜೂನ್ 29 ರಿಂದ ಜುಲೈ 1 ರವರೆಗೆ ಲಸಿಕೆ ಪಡೆಯದ ಮಕ್ಕಳನ್ನು ಪತ್ತೆ ಹಚ್ಚಿ ಲಸಿಕೆ ನೀಡಲು ಆರೋಗ್ಯ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಲಸಿಕೆ ನೀಡಲಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಮಗುವೂ ಲಸಿಕೆಯಿಂದ ವಂಚಿತವಾಗಬಾರದು ಎಂದು ನಿರ್ದೇಶನ ನೀಡಿದರು.

ಲಸಿಕೆ ನೀಡಲು ಜಿಲ್ಲೆಯಲ್ಲಿ 778059 ಮನೆಗಳನ್ನು ಹಾಗೂ 0-5 ವರ್ಷದೊಳಗಿನ 219521 ಮಕ್ಕಳನ್ನು ಗುರುತಿಸಲಾಗಿದೆ‌ 1641 ಬೂತ್ ತೆರೆದು ಲಸಿಕೆ ನೀಡಲಾಗುವುದು, ಲಸಿಕೆ ನೀಡಲು 6772 ವ್ಯಾಕ್ಸಿನೇಟರ್ ಹಾಗೂ 328 ಸೂಪರ್ ವೈಸರ್ ಗಳನ್ನು ನೇಮಕ ಮಾಡಲಾಗುವುದು ಎಂದರು.

ಲಸಿಕೆಯಿಂದ ಯಾರು ವಂಚಿತರಾಗಬಾರದು ಎಂದು ಕಟ್ಟಡ ಕಾರ್ಮಿಕರು, ಇಟ್ಟಿಗೆ ತಯಾರು ಮಾಡುವ ಕಾರ್ಮಿಕರು, ವಲಸೆ ಕಾರ್ಮಿಕರು ವಾಸಿಸುವ ಸ್ಥಳ ಸೇರಿದಂತೆ ಇನ್ನಿತರೆ ಒಟ್ಟು 1396 ಹೈ ರಿಸ್ಕ್ ಏರಿಯಾಗಳನ್ನು ಗುರುತು ಮಾಡಲಾಗಿರುತ್ತದೆ. ಲಸಿಕೆ ನೀಡಲು 51 ಮೊಬೈಲ್ ಟೀಂ ಸಹ ರಚಿಸಲಾಗಿರುತ್ತದೆ. ಹೈ ರಿಸ್ಕ್ ಏರಿಯಾ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ತಿಳಿಸಿದರು.

ಆರ್.ಸಿ.ಹೆಚ್ ಅಧಿಕಾರಿ ಡಾ: ಸಿರಾಜ್ ಅಹಮದ್ ಅವರು ಮಾತನಾಡಿ
ದೇಶದಲ್ಲಿ 2011 ರಲ್ಲಿ ಕೊನೆಯದಾಗಿ ಪೋಲಿಯೋ ಪ್ರಕರಣ ವರದಿಯಾಗಿದ್ದು ನಂತರ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. 2014 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಪೋಲಿಯೋ ಮುಕ್ತ ದೇಶ ಎಂದು ಘೋಷಿಸಿದೆ. ಆದರೂ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಪಘಾನಿಸ್ತಾನಗಳಲ್ಲಿ ಕೆಲವು ಪೋಲಿಯೊ ಪ್ರಕರಣಗಳು ವರದಿಯಾಗುತ್ತಿದ್ದು, ಹೆಚ್ಚಿನ ನಿಗಾ ವಹಿಸುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಭಾರತದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ ಮುಂದುವರಿಸಲಾಗಿದೆ ಎಂದರು.

ಮೈಸೂರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ ಹಾಗೂ ಇನ್ನಿತರೆ ಪ್ರವಾಸಿ ತಾಣಗಳಲ್ಲಿ, ಜೂನ್ 28 ರಂದು ಟ್ರನ್ಸಿಟ್ ಬೂತ್ ತೆರೆಯಲು ಅಗತ್ಯ ಸಿದ್ಧತೆ ಮಾಡುಕೊಳ್ಳಿ.ವಲಸೆ, ಕಟ್ಟಡ ಹಾಗೂ ಮತ್ತಿತರ ಕೂಲಿ ಕಾರ್ಮಿಕರ ಮಕ್ಕಳು ವಾಸಿಸುವ ಸ್ಥಳಗಳಲ್ಲಿ ಲಸಿಕಾ ಪಡೆಯುವಂತೆ ಹೆಚ್ಚು ಜಾಗೃತಿ ಕಾರ್ಯಕ್ರಮ ಆಯೋಜಿಸಿ ಎಂದರು‌.

2025 ನೇ ಸಾಲಿನಲ್ಲಿ ನಡೆದ ಪಲ್ಸ್ ಪೋಲಿಯೊ ಅಭಿಯಾನದಲ್ಲಿ ಜಿಲ್ಲೆಯಲ್ಲಿ 222084 ಮಕ್ಕಳಿಗೆ ಲಸಿಕೆ ನೀಡಲು ಗುರಿ ನಿಗದಿಪಡಿಸಲಾಗಿತ್ತು. 233484 ಮಕ್ಕಳಿಗೆ ಲಸಿಕೆ ನೀಡಿ ಶೇ 105.13 ಸಾಧನೆ‌ ಮಾಡಲಾಗಿದೆ ಎಂದರು‌

ಪಲ್ಸ್ ಪೊಲೀಯೋ ಕಾರ್ಯಕ್ರಮದ ಯಶಸ್ವಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಸ್ವಯಂ ಸೇವಾ ಸಂಸ್ಥೆಗಳು,, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ: ಗೋಪಿನಾಥ್, ಡಾ: ನಾಗರಾಜ್, ಡಾ: ಬೃಂದ, ಡಾ: ಸುವರ್ಣ, ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ: ರವಿ ಕುಮಾರ್, ಡಾ: ಪುಟ್ಟತಾಯಮ್ಮ, ಡಾ: ಈಶ್ಚರ್, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment